ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ವೈರಸ್ ಶಂಕಿತ ವೃದ್ಧ ಸಾವು

ರಾಜ್ಯದಲ್ಲಿ ಮಾರಣಾಂತಿಕ ಕೊರೊನಾ ಸೋಂಕಿಗೆ ಶಂಕಿತ ವೃದ್ಧನೋರ್ವ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಕರೋನಾ ವೈರಸ್
ಕರೋನಾ ವೈರಸ್

ಕಲಬುರಗಿ: ರಾಜ್ಯದಲ್ಲಿ ಮಾರಣಾಂತಿಕ ಕೊರೊನಾ ಸೋಂಕಿಗೆ ಶಂಕಿತ ವೃದ್ಧನೋರ್ವ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಆದರೆ, ಕೊರೊನಾ ದಿಂದಲೇ ಸಾವನ್ನಪ್ಪಿರುವುದು ದೃಢಪಟ್ಟಿಲ್ಲ. ಸದ್ಯ ವೈದ್ಯಕೀಯ ವರದಿಗಾಗಿ ಆರೋಗ್ಯ ಇಲಾಖೆ ಕಾಯುತ್ತಿದೆ.

ಫೆ. 29 ರಂದು 76 ವರ್ಷದ ವೃದ್ಧರೊಬ್ಬರು ಸೌದಿ ಅರೇಬಿಯಾದಿಂದ ಕಲಬುರಗಿಗೆ ಬಂದಿದ್ದರು. 

ನಂತರ, ಮಾರ್ಚ್ 5 ರಂದು ಅವರಲ್ಲಿ ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೊರೊನಾ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಅವರ ಗಂಟಲು ದ್ರವ ಸಂಗ್ರಹಿಸಿ, ವೈದ್ಯರು ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ಲ್ಯಾಬ್ ಗೆ ಕಳುಹಿಸಿದ್ದರು.

ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಕುಟುಂಬ ಸದಸ್ಯರು ವೃದ್ಧನನ್ನು ಸೋಮವಾರ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

ಇಂದು ಸಂಜೆ ಅಥವಾ ನಾಳೆ ಪರೀಕ್ಷೆಯ ಮಾದರಿ ಹೊರಬರಬೇಕಿದೆ. ಆದರೆ, ಅಷ್ಟರಲ್ಲೇ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.
 
ಆದರೆ, ಕೊರೊನಾ ದಿಂದಲೇ ಸಾವನ್ನಪ್ಪಿರುವುದು ದೃಢಪಟ್ಟಿಲ್ಲ. ಸದ್ಯ ವೈದ್ಯಕೀಯ ವರದಿಗಾಗಿ ಆರೋಗ್ಯ ಇಲಾಖೆ ಕಾಯುತ್ತಿದೆ.

ವೃದ್ಧನ ಅಂತ್ಯಕ್ರಿಯೆ ಮುಗಿಯುವವರೆಗೂ ಜಿಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳಾದ ಶರಣಬಸಪ್ಪಾ ಕ್ಯಾತನಾಳ, ಅವರ ತಂಡ ಉಸ್ತುವಾರಿ ವಹಿಸಿಕೊಂಡು ಎಲ್ಲಾ ಮುಂಜಾಗ್ರತೆ ಹಾಗೂ ನಿಯಂತ್ರಣ ಕ್ರಮ ಕೈಗೊಂಡು ವರದಿ ನೀಡುವಂತೆ ಅವರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಆದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com