ಕೊರೊನಾ ಭೀತಿ: ಪರಿಸರ ಸ್ನೇಹಿ ಪ್ರವಾಸೋದ್ಯಮ, ಸಫಾರಿ ರದ್ದುಪಡಿಸಲು ಅರಣ್ಯ ಇಲಾಖೆ ಚಿಂತನೆ 

ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಪ್ರವಾಸೋದ್ಯಮ ಮತ್ತು ಸಫಾರಿಯನ್ನು ರದ್ದುಗೊಳಿಸಲು ರಾಜ್ಯ ಅರಣ್ಯ ಇಲಾಖೆ ಮುಂದಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಪ್ರವಾಸೋದ್ಯಮ ಮತ್ತು ಸಫಾರಿಯನ್ನು ರದ್ದುಗೊಳಿಸಲು ರಾಜ್ಯ ಅರಣ್ಯ ಇಲಾಖೆ ಮುಂದಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತು ಹಕ್ಕಿ ಜ್ವರದಿಂದಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. 

ಈ ತಿಂಗಳ 31ರವರೆಗೆ ಕೇರಳ ಸರ್ಕಾರ ಅರಣ್ಯ ಪ್ರದೇಶಗಳಲ್ಲಿ ಸಫಾರಿ, ಪ್ರವಾಸೋದ್ಯಮ ಮತ್ತು ಸಾಹಸ ಚಟುವಟಿಕೆಗಳಿಗೆ ನಿಷೇಧ ಹೇರಿ ಈಗಾಗಲೇ ಆದೇಶ ಹೊರಡಿಸಿದೆ. 

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಕ ಸಂಜಯ್ ಮೋಹನ್, ಇಲ್ಲಿಯವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಈ ಬಗ್ಗೆ ಯೋಚಿಸುತ್ತಿದ್ದೇವೆ ಎಂದಿದ್ದಾರೆ.

ಇನ್ನು ಅರಣ್ಯ ಪ್ರಧಾನ ಮುಖ್ಯ ಸಂರಕ್ಷಕ ಪುನಟಿ ಶ್ರೀಧರ್, ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರದಿರುವುದು ಉತ್ತಮ. ಮುಂದಿನ ಕ್ರಮಗಳ ಬಗ್ಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದರು.

ಈ ಮಧ್ಯೆ ಮಕ್ಕಳ ಬೇಸಿಗೆ ಶಿಬಿರವೆಂದು ಖಾಸಗಿ ಸಂಸ್ಥೆಗಳು ನಡೆಸುವ ಸಾಹಸ ಕ್ರೀಡೆಗಳನ್ನು, ಪರಿಸರ ಸ್ನೇಹಿ ಚಟುವಟಿಕೆಗಳನ್ನು ರದ್ದುಗೊಳಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com