ಗ್ರೀಸ್ ನಿಂದ ಮರಳಿದ ಉದ್ಯೋಗಿಯಲ್ಲಿ 'ಕೊರೊನಾ'ಪತ್ತೆ: ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿದ ಗೂಗಲ್ ಸಂಸ್ಥೆ

ಗೂಗಲ್ ಕಂಪೆನಿಯ ಉದ್ಯೋಗಿಯೊಬ್ಬರಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಇತರ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. 
ಗ್ರೀಸ್ ನಿಂದ ಮರಳಿದ ಉದ್ಯೋಗಿಯಲ್ಲಿ 'ಕೊರೊನಾ'ಪತ್ತೆ: ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿದ ಗೂಗಲ್ ಸಂಸ್ಥೆ

ಬೆಂಗಳೂರು: ಗೂಗಲ್ ಕಂಪೆನಿಯ ಉದ್ಯೋಗಿಯೊಬ್ಬರಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಇತರ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. 

ಕಳೆದ ತಿಂಗಳು ಮದುವೆಯಾಗಿ ಗ್ರೀಸ್ ಗೆ ಹೋಗಿದ್ದ 26 ವರ್ಷದ ವ್ಯಕ್ತಿ ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದು ಇಲ್ಲಿ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಗೂಗಲ್ ಕಚೇರಿಯಲ್ಲಿ ಕೆಲ ಹೊತ್ತು ಕೆಲಸ ಮಾಡಿದ ನಂತರ ಜ್ವರ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿ ನೋಡಿದಾಗ ಕೊರೊನಾ ಸೋಂಕು ಪತ್ತೆಯಾಗಿದೆ.

ಈ ವ್ಯಕ್ತಿಯನ್ನು ಬೆಂಗಳೂರಿನ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ. ಈ ಎಂಜಿನಿಯರ್ ಜೊತೆ ಯಾರ್ಯಾರು ಸಂಪರ್ಕದಲ್ಲಿದ್ದರು ಎಂದು ಪತ್ತೆಹಚ್ಚಲಾಗುತ್ತಿದೆ. 

ಗೂಗಲ್ ಕಂಪೆನಿ ಏನು ಹೇಳುತ್ತದೆ: ನಮ್ಮ ಬೆಂಗಳೂರು ಕಚೇರಿಯ ಉದ್ಯೋಗಿಯೊಬ್ಬರಲ್ಲಿ ಕೋವಿಡ್-19 ಕಾಣಿಸಿಕೊಂಡಿದೆ. ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮುನ್ನ ಅವರು ನಮ್ಮ ಬೆಂಗಳೂರಿನ ಕಚೇರಿಯಲ್ಲಿ ಸ್ವಲ್ಪ ಹೊತ್ತು ಇದ್ದರು. ಸೋಂಕು ಪತ್ತೆಯಾದ ಕೂಡಲೇ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನ ಗೂಗಲ್ ಕಚೇರಿಯ ಇತರ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಮತ್ತು ಸೋಂಕು ತಗುಲಿದ ವ್ಯಕ್ತಿ ಜೊತೆ ನಿಕಟ ಸಂಪರ್ಕದಲ್ಲಿದ್ದವರನ್ನು ಪ್ರತ್ಯೇಕವಾಗಿ ಸ್ವಲ್ಪ ದಿನಗಳ ಕಾಲ ಇರುವಂತೆ ಸೂಚಿಸಲಾಗಿದೆ ಎಂದಿದೆ. 

ಭಾರತದಲ್ಲಿ ಡೆಲ್ ಇಂಡಿಯಾ ಮತ್ತು ಮೈಂಡ್ ಟ್ರೀ ಕಂಪೆನಿಗಳ ಬಳಿಕ ಕೊರೊನಾ ವೈರಸ್ ಸೋಂಕು ತಗುಲಿದ ಐಟಿ ಕಂಪೆನಿಗಳ ಪೈಕಿ ಮೂರನೆಯದ್ದು ಗೂಗಲ್ ಆಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com