ಬಿಝಿಯಾದ ಕೆಪಿಸಿಸಿ ಅಧ್ಯಕ್ಷ: ಖರ್ಗೆ, ಸಿದ್ದು, ಮುನಿಯಪ್ಪ, ದಿನೇಶ್ ಜೊತೆಗೆ ಚರ್ಚೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಿರೀಕ್ಷೆಯಂತೆಯೇ ಪಕ್ಷದ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ತಮ್ಮ ಪ್ರಯತ್ನ ಆರಂಭಿಸಿದ್ದು, ಶನಿವಾರ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಕೆ.ಹೆಚ್.ಮುನಿಯಪ್ಪ ಹಾಗೂ ದಿನೇಶ್ ಗುಂಡೂರಾವ್ ಅವರ ನಿವಾಸಗಳಿಗೆ ಭೇಟಿ ನೀಡಿ ಪಕ್ಷವನ್ನು ಮುನ್ನಡೆಸಲು ಸಹಕಾರ ಕೋರಿದರು. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಿರೀಕ್ಷೆಯಂತೆಯೇ ಪಕ್ಷದ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ತಮ್ಮ ಪ್ರಯತ್ನ ಆರಂಭಿಸಿದ್ದು, ಶನಿವಾರ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಕೆ.ಹೆಚ್.ಮುನಿಯಪ್ಪ ಹಾಗೂ ದಿನೇಶ್ ಗುಂಡೂರಾವ್ ಅವರ ನಿವಾಸಗಳಿಗೆ ಭೇಟಿ ನೀಡಿ ಪಕ್ಷವನ್ನು ಮುನ್ನಡೆಸಲು ಸಹಕಾರ ಕೋರಿದರು. 

ಶನಿವಾರ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರ ಗಾಂಧಿ ಭವನ ಸಮೀಪದ ನಿವಾಸಕ್ಕೆ ಭೇಟಿ ನೀಡಿದ ಅವರು, ಶಾಲುಹೊದಿಸಿ, ಹಾರ ಹಾಕಿ ಅಭಿನಂದಿಸಿದರು. ಬಳಿಕ ಸುಮಾರು ಒಂದು ಗಂಟೆ ಕಾಲ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಕೂಡ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಿ, ಶುಭ ಹಾರೈಸಿದರು. 

ಬಳಿಕ ಸದಾಶಿವನಗರದಲ್ಲಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ನಿವಾಸಕ್ಕೆ ತೆರಳಿದ ಶಿವಕುಮಾರ್ ಅವರು, ಖರ್ಗೆ ಅವರಿಗೆ ಕೃತಜ್ಞತೆ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವಂತಹ ಒಟ್ಟಾಗಿ ಮಾಡುತ್ತೇನೆ. ಪಕ್ಷ ಸಂಘಟನೆಗೆ ಹಿರಿಯರ ಅನುಭವ, ಮಾರ್ಗದರ್ಶನ, ಯುವಕರ ಸ್ಫೂರ್ತಿ, ಮಹಿಳೆಯರ ಸಂಘಟನಾ ಶಕ್ತಿ ಅತ್ಯಗತ್ಯ, ಇಲ್ಲದಿದ್ದರೆ ಪಕ್ಷವನ್ನು ಸದೃಢವಾಗಿ ಸಂಘಟಿಸಲು ಸಾಧ್ಯವಿಲ್ಲ. ಹಾಗಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತೇನೆ ಎಂದು ಹೇಳಿದರು. 

ಅಧಿಕಾರ ಸ್ವೀಕಾರ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ನಾಯಕರೊಂದಿಗೆ ಶೀಘ್ರವೇ ದೆಹಲಿಗೆ ತೆರಳಿದ್ದೇನೆ. ಆ ನಂತರ ಯಾವ ದಿನ ಅಧಿಕಾರ ಸ್ವೀಕಾರ ಮಾಡಬೇಕು. ಎನ್ನುವ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು. 

ಶನಿವಾರ ಸಂಜೆ ರಾಜ್ ಮಹಲ್ ವಿಲಾಸ್ 2ನೇ ಹಂತದಲ್ಲಿರುವ ಕೆಪಿಸಿಸಿ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com