ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿ ಹಬ್ಬಿಸಿದ ವಿದ್ಯಾರ್ಥಿ ಪೋಲೀಸ್ ವಶಕ್ಕೆ

ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟ ಆರೋಪದ ಮೇಲೆ ನಗರ ಪೋಲೀಸರು ವಿದ್ಯಾರ್ಥಿಯನ್ನುಯ್ ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಯು ಪಿಯುಸಿಯ ಕಂಪ್ಯೂಟರ್ ಸೈನ್ಸ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ತಾಣಗಳಲ್ಲಿ ಹರಿದು ಬಿಟ್ಟಿದ್ದನು. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟ ಆರೋಪದ ಮೇಲೆ ನಗರ ಪೋಲೀಸರು ವಿದ್ಯಾರ್ಥಿಯನ್ನುಯ್ ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಯು ಪಿಯುಸಿಯ ಕಂಪ್ಯೂಟರ್ ಸೈನ್ಸ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ತಾಣಗಳಲ್ಲಿ ಹರಿದು ಬಿಟ್ಟಿದ್ದನು. 

ಶನಿವಾರ ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲು ಕೋರಿ ವಿಶ್ವವಿದ್ಯಾಲಯ  ಶಿಕ್ಷಣ ಇಲಾಖೆಯ ಸಹಾಯವಾಣಿಯನ್ನು ಸಂಪರ್ಕಿಸಿ ಮನವಿ ಸಲ್ಲಿಸಿದ ಹಿನ್ನೆಲೆ ಎಚ್ಚೆತ್ತುಕೊಂಡ ಅಧಿಕಾರಿಗಳು ಯಶವಂತಪುರ ಪೋಲೀಸರನ್ನು ಸಂಪರ್ಕಿಸಿದ್ದಾರೆ. 

ತಕ್ಷಣ ಪೋಲೀಸರು ಕಾರ್ಯಪ್ರವೃತ್ತರಾಗಿ ವಿದ್ಯಾರ್ಥಿಯನ್ನು ಪತ್ತೆ ಂಆಡಿ ಬಂಧಿಸಿದ್ದಾರೆ. ವಿದ್ಯಾರ್ಥಿಗೆ ತಾನು ಕಂಪ್ಯೂಟರ್ ಸೈನ್ಸ್ ನಲ್ಲಿ ಫೇಲ್ ಆಗುವ ಭಯವಿತ್ತು. ಹಾಗಾಗಿ ಆತ ಪ್ರಶ್ನೆಪತ್ರಿಕೆ ಸೋರಿಕೆಯ ನಾಟಕವಾಡಿದ್ದಾಗಿ ತಿಳಿದುಬಂದಿದೆ. ಇದೀಗ ವಿದ್ಯಾರ್ಥಿಯನ್ನು ಪರೀಕ್ಷೆ ಬರೆಯದಂತೆ ನಿರ್ಬಂಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com