ಬಾಗಲಕೋಟೆ: ವೈದ್ಯ ದಂಪತಿಗೆ ಕೊರೋನಾ ಸೋಂಕು ದೃಢಪಟ್ಟಿಲ್ಲ, ಆರೋಗ್ಯ ಇಲಾಖೆ ಸ್ಪಷ್ಟನೆ

ಇತ್ತೀಚೆಗೆ ವಿದೇಶಕ್ಕೆ ತೆರಳಿದ್ದ ಬಾಗಲಕೋಟೆ ಮೂಲದ ವೈದ್ಯ ದಂಪತಿಗೆ ಕೊರೋನಾ ಸೋಂಕು ದೃಢಪಟ್ಟಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

Published: 16th March 2020 12:41 PM  |   Last Updated: 16th March 2020 01:06 PM   |  A+A-


Corona infection not confirmed for the doctor couple in Bagalkot

ಸಾಂದರ್ಭಿಕ ಚಿತ್ರ

Posted By : Srinivasamurthy VN
Source : UNI

ಬಾಗಲಕೋಟೆ: ಇತ್ತೀಚೆಗೆ ವಿದೇಶಕ್ಕೆ ತೆರಳಿದ್ದ ಬಾಗಲಕೋಟೆ ಮೂಲದ ವೈದ್ಯ ದಂಪತಿಗೆ ಕೊರೋನಾ ಸೋಂಕು ದೃಢಪಟ್ಟಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

ಬಾಗಲಕೋಟೆಯ ವೈದ್ಯ ದಂಪತಿಗೆ ಕೊರೊನಾ ಸೋಂಕಿದೆ ಎಂಬ ವದಂತಿಯೊಂದು ಹಬ್ಬಿತ್ತು. ಇದನ್ನು ಜಿಲ್ಲಾ ಆರೋಗ್ಯ ಇಲಾಖೆ ಅಲ್ಲಗಳೆದಿದೆ. ವೈದ್ಯಕೀಯ ತಪಾಸಣೆಯಲ್ಲೂ ಸೋಂಕು ಪತ್ತೆಯಾಗಿಲ್ಲ ಎಂದು ಬಾಗಲಕೋಟೆ ಜಿಲ್ಲಾ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿ, ವದಂತಿಗಳಿಗೆ ತೆರೆ ಎಳೆದಿದೆ.

ಇನ್ನು ಇದೇ ವಿಚಾರವಾಗಿ ಸ್ಪಷ್ಟನೆ ನೀಡಿರುವ ವೈದ್ಯ ದಂಪತಿ, ತಾವು ಹೋಳಿ ಹಬ್ಬಕ್ಕೆ ವಿದೇಶಕ್ಕೆ ಹೋಗಿದ್ದು ನಿಜ. ಆದರೆ, ವಿದೇಶದಿಂದ ವಾಪಸ್ಸಾದ ಬಳಿಕ ತಾವು ಯಾವುದೇ ವೈದ್ಯಕೀಯ ಸೇವೆ ನೀಡುತ್ತಿಲ್ಲ. ಅಲ್ಲದೇ ತಾವು ಜನಸಂಪರ್ಕದಿಂದ ದೂರ ಉಳಿದಿದ್ದು, ಸರ್ಕಾರದ ಆದೇಶದಂತೆ ಪ್ರತ್ಯೇಕ ಕೊಠಡಿಯಲ್ಲಿ ವಾಸವಾಗಿದ್ದೇವೆ ಎಂದು ಹೇಳಿದ್ದಾರೆ. 

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp