ಡಿಸಿಗಳೊಂದಿಗೆ ಸಿಎಂ ವಿಡಿಯೊ ಕಾನ್ಫರೆನ್ಸ್: ಬಸ್, ರೈಲು ನಿಲ್ದಾಣಗಳಲ್ಲಿ ಹೆಲ್ಪ್ ಡೆಸ್ಕ್ , ಪ್ರಯಾಣಿಕರ ಸ್ಕ್ರೀನಿಂಗ್‍ಗೆ ಕ್ರಮ

ಕೋವಿಡ್ 19 ಅಥವಾ ಕೊರೋನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾರ್ಚ್ 13 ರಂದು ಹೊರಡಿಸಿದ ಆದೇಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತಂದಿರುವ ಬಗ್ಗೆ ಪರಿಶೀಲನೆಗಾಗಿ ಸೋಮವಾರ ಮುಖ್ಯಮಂತ್ರಿ...

Published: 16th March 2020 07:50 PM  |   Last Updated: 16th March 2020 07:50 PM   |  A+A-


BS Yediyurappa instructs to prepare revised blueprint of New Delhi's Karnataka Bhavan

ಬಿಎಸ್ ಯಡಿಯೂರಪ್ಪ

Posted By : Lingaraj Badiger
Source : UNI

ಬೆಂಗಳೂರು: ಕೋವಿಡ್ 19 ಅಥವಾ ಕೊರೋನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾರ್ಚ್ 13 ರಂದು ಹೊರಡಿಸಿದ ಆದೇಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತಂದಿರುವ ಬಗ್ಗೆ ಪರಿಶೀಲನೆಗಾಗಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. 

ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ. ವಿಜಯ ಭಾಸ್ಕರ್, ಆರೋಗ್ಯ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು, ಆದೇಶಗಳನ್ನು ನಿಗದಿತ ಅವಧಿಯವರೆಗೆ ಕಟ್ಟುನಿಟ್ಟಾಗಿ ಜಾರಿಯಾಗಿರುವ ಬಗ್ಗೆ ಸೂಕ್ತ ಮೇಲ್ವಿಚಾರಣೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

ಮಂಡ್ಯ, ಮೈಸೂರು, ವಿಜಯಪುರ, ಬಳ್ಳಾರಿ, ಕೊಪ್ಪಳ, ಕೊಡಗು ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ ಮಾಡಲಾಗಿದೆ. ಹೋಮ್ ಸ್ಟೇಗಳ ಬಗ್ಗೆ ವಿಶೇಷ ನಿಗಾ ವಹಿಸಲು ಸೂಚಿಸಲಾಯಿತು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಹೊರದೇಶದಿಂದ ಬಂದವರನ್ನು ಹೋಂ ಕ್ವಾರಂಟೈನ್‍ನಲ್ಲಿಟ್ಟಿರುವ ಬಗ್ಗೆ ಮಾಹಿತಿ ಪಡೆಯಲಾಗಿದೆ. ವಿದೇಶಿ ಪ್ರವಾಸಿಗರು, ವಿದೇಶ ಪ್ರಯಾಣದಿಂದ ಹಿಂತಿರುಗಿದವರ ಮೇಲೆ ತೀವ್ರ ನಿಗಾ ವಹಿಸಲಾಗುತ್ತಿದೆ. ಪ್ರತಿ ದಿನ ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ ಸಭೆ ನಡೆಸಿ ಜಿಲ್ಲೆಯಲ್ಲಿನ ಪರಿಸ್ಥಿತಿ ಅವಲೋಕಿಸಲು ಸೂಚನೆ ನೀಡಲಾಗಿದೆ.

ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದ ಜಿಲ್ಲೆಗಳಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಕಾರ ಪಡೆಯಲು ಸೂಚಿಸಲಾಗಿದೆ. ರಾಜ್ಯದ ಗಡಿ ಭಾಗಗಳಲ್ಲಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪನೆ, ಚೆಕ್‍ಪೋಸ್ಟ್‌ಗಳಲ್ಲಿ ಪ್ರಯಾಣಿಕರ ಸ್ಕ್ರೀನಿಂಗ್‍ಗೆ ಕ್ರಮ ವಹಿಸಲು ಸೂಚಿಸಲಾಗಿದೆ

ಜಾತ್ರೆ ಸಂತೆಗಳನ್ನು ನಿಷೇಧಿಸಲಾಗಿದೆ. ದೊಡ್ಡ ಪ್ರಮಾಣದಲ್ಲಿ ದೇವಸ್ಥಾನಗಳಿಗೆ ಜನರು ಭೇಟಿ ನೀಡುವ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಔಷಧಿಗಳನ್ನು ಕರ್ನಾಟಕ ಡ್ರಗ್ಸ್ ಲಾಜಿಸ್ಟಿಕ್ಸ್ ಸಂಸ್ಥೆಯಿಂದ ಪಡೆಯಲು ಸೂಚಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ರೈಲು ನಿಲ್ದಾಣ, ಬಸ್ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ನಡೆಸಲಾಗುತ್ತಿದೆ. ಬೀದರ್, ವಿಜಯಪುರ ಜಿಲ್ಲೆಗಳಿಗೆ ಹೆಚ್ಚುವರಿ ವೆಂಟಿಲೇಟರ್ ಒದಗಿಸಲು ಬೇಡಿಕೆ ಸಲ್ಲಿಸಿದ್ದಾರೆ. ಒದಗಿಸಲು ಕ್ರಮ ವಹಿಸಲಾಗುವುದು. ಮಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚುವರಿ ಪ್ರಯೋಗಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ಖರೀದಿಗೆ ಅನುಕೂಲ ಕಲ್ಪಿಸಲು ಸೂಪರ್ ಮಾರ್ಕೆಟ್ ತೆರೆಯಲು ಅನುಮತಿ ನೀಡಲು ಸೂಚಿಸಲಾಯಿತು. ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳುವಾಗ ಸಾರ್ವಜನಿಕರಿಗೆ ತೊಂದರೆ ನೀಡಬಾರದು ಎಂದು ನಿರ್ದೇಶನ ನೀಡಲಾಗಿದೆ. ಕೋವಿಡ್ 19 ಶಂಕಿತ ಪ್ರಕರಣಗಳನ್ನು ಜಿಲ್ಲಾ ಮಟ್ಟದ ಆಸ್ಪತ್ರೆಯಲ್ಲಿಯೇ ನಿರ್ವಹಿಸಲು ಸೂಚಿಸಲಾಯಿತು.

ಬೆಂಗಳೂರಿನಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಲು ಸೂಚಿಸಲಾಯಿತು. ಶುದ್ಧ ಕುಡಿಯುವ ನೀರು ಸರಬರಾಜಿಗೆ ಗಮನ ನೀಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Stay up to date on all the latest ರಾಜ್ಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp