ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿಗೆ ಕೊರೋನಾ ವೈರಸ್, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ

ರಾಜ್ಯದಲ್ಲಿ ಮಾರಣಾಂತಿಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ....

Published: 16th March 2020 08:21 PM  |   Last Updated: 16th March 2020 08:21 PM   |  A+A-


Diplomat from Philippines first known coronavirus case at U.N. in New York

ಸಾಂದರ್ಭಿಕ ಚಿತ್ರ

Posted By : Lingaraj Badiger
Source : Online Desk

ಬೆಂಗಳೂರು: ರಾಜ್ಯದಲ್ಲಿ ಮಾರಣಾಂತಿಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಈ ಹಿಂದೆ ಅಮೆರಿಕದಿಂದ ಬಂದಿದ್ದ ಟೆಕ್ಕಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು. ಈಗ ಆ ಟೆಕ್ಕಿಯ  ಸಹೋದ್ಯೋಗಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಅವರು ತಿಳಿಸಿದ್ದಾರೆ.

ಮಾರ್ಚ್ 8 ರಂದು ಮೈಂಡ್ ಟ್ರೀ ಕಂಪನಿಯ ಟೆಕ್ಕಿ ಬೆಂಗಳೂರಿಗೆ ಬಂದಿದ್ದು,. ಇದು ಕೊರೊನಾ ಪೀಡಿತ 4ನೇ ಕೇಸ್ ಆಗಿತ್ತು. ಈ ಟೆಕ್ಕಿಯ ಜೊತೆಯಲ್ಲಿ 32 ವರ್ಷದ ಈ ವ್ಯಕ್ತಿ ಸಹ ಅಮೆರಿಕಕ್ಕೆ ತೆರಳಿದ್ದರು. ಇಷ್ಟು ದಿನ ಮನೆಯಲ್ಲೇ ನಿಗಾದಲ್ಲಿದ್ದ ಈ ವ್ಯಕ್ತಿ ಈಗ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ವೈರಸ್ ಪಾಸಿಟಿವ್ ಬಂದಿದೆ ಎಂದರು.

ಈಗ ಸೋಂಕು ಪತ್ತೆಯಾಗಿರುವ ಟೆಕ್ಕಿಯ ಪತ್ನಿ, ಮನೆಗೆಲಸದಾಕೆ ಹಾಗೂ ಅವರು ಸಂಪರ್ಕಿಸಿದ ಹಲವರ ಮೇಲೆ ನಿಗಾ ಇಡಲಾಗಿದೆ. ಈ ಬಗ್ಗೆ ಹೆಚ್ಚಿನ ವಿವರವನ್ನು ನಾಳೆ ನೀಡಲಾಗುವುದು ಎಂದು ವೈದ್ಯಕೀಯ ಸಚಿವಾಲಯದ ಮೂಲಗಳು ತಿಳಿಸಿವೆ.

Stay up to date on all the latest ರಾಜ್ಯ news
Poll
Marraige

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 18 ರಿಂದ ಹೆಚ್ಚಿಸಬೇಕೆ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp