ಒಂದು ವಾರದಲ್ಲಿ ಪಾಟೀಲ್ ಪುಟ್ಟಪ್ಪ ಅವರಿಗೆ ಬಸವ ಪ್ರಶಸ್ತಿ ಪ್ರದಾನ: ಸಿಎಂ ಯಡಿಯೂರಪ್ಪ

ಇನ್ನೊಂದು ವಾರದಲ್ಲಿ ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ ಅವರಿಗೆ ರಾಷ್ಟ್ರೀಯ ಬಸವ ಪುರಸ್ಕಾರ  - 2017 ಅನ್ನು ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ
ಅನಾರೋಗ್ಯಕ್ಕೀಡಾಗಿರುವ ಪತ್ರಕರ್ತ ಪಾಟೀಲ್ ಪುಟ್ಟಪ್ಪನವರ ಕ್ಷೇಮ ವಿಚಾರಿಸಿದ ಸಿಎಂ
ಅನಾರೋಗ್ಯಕ್ಕೀಡಾಗಿರುವ ಪತ್ರಕರ್ತ ಪಾಟೀಲ್ ಪುಟ್ಟಪ್ಪನವರ ಕ್ಷೇಮ ವಿಚಾರಿಸಿದ ಸಿಎಂ

ಹುಬ್ಬಳ್ಳಿ: ಇನ್ನೊಂದು ವಾರದಲ್ಲಿ ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ ಅವರಿಗೆ ರಾಷ್ಟ್ರೀಯ ಬಸವ ಪುರಸ್ಕಾರ  - 2017 ಅನ್ನು ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಪಾಟೀಲ್ ಪುಟ್ಟಪ್ಪ ಅವರನ್ನು ಭೇಟಿಯಾದ ನಂತರ ಮಾತನಾಡಿದ ಯಡಿಯೂರಪ್ಪ "ಹಿರಿಯ ಕನ್ನಡ ಪರ ಹೋರಾಟಗಾರರಾದ ಪಾಟೀಲ್ ಪುಟ್ಟಪ್ಪ ಅವರ ರ ವೈದ್ಯಕೀಯ ವೆಚ್ಚವನ್ನು ರಾಜ್ಯ ಸರ್ಕಾರ ನೋಡಿಕೊಳ್ಳಲಿದೆ" ಎಂದರು.

ಕಳೆದ ಒಂದು ತಿಂಗಳಿನಿಂದ ವಯೋಸಹಜ ಅನಾರೋಗ್ಯದಿಂದ ಪಾಟೀಲ್ ಪುಟ್ಟಪ್ಪ ಕಿಮ್ಸ್ ಗೆ ದಾಖಲಾಗಿದ್ದಾರೆ.

“ಕೆಲವು ಕಾರಣಗಳಿಗಾಗಿ ಪುಟ್ಟಪ್ಪಅವರಿಗೆ 2017 ಸಾಲಿನ ಬಸವ ಪುರಸ್ಕಾರ ಪ್ರಧಾನ ಮಾಡಲಾಗಿಲ್ಲ. ಈಗ, 10 ಲಕ್ಷ ರೂಪಾಯಿಗಳನ್ನು ಒಳಗೊಂಡ ಪ್ರಶಸ್ತಿಯನ್ನು ಅವರಿಗೆ ನೀಡುವಂತೆ ಸಂಬಂಧಪಟ್ಟವರನ್ನು ಕೇಳಿದ್ದೇನೆ, ”ಎಂದು ಸಿಎಂ ಹೇಳಿದರು.

ಮುಖ್ಯಮಂತ್ರಿಗಳು ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಜಗದೀಶ್ ಶೆಟ್ಟರ್ ಮತ್ತು ಸಂಸದೆ ಶೋಭಾ  ಕರಂದ್ಲಾಜೆ ಅವರೊಂದಿಗೆ ಪುಟ್ಟಪ್ಪ ಅವರನ್ನು ಭೇಟಿಯಾಗಿದ್ದರು.

ಅದಾಗಿ ಭಾನುವಾರ ಸಂಜೆ ಡಿಸಿಎಂ ಗೋವಿಂದ ಕಾರಜೋಳ ಸಹ ಪಾಟೀಲ್ ಪುಟ್ಟಪ್ಪ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com