ಪ್ರಯಾಣಿಕರ ತಪಾಸಣೆಗೆ ರಾಜ್ಯ ಸರ್ಕಾರದಿಂದ ವಿಮಾನಯಾನ ನಿರ್ದೇಶನಾಲಯಕ್ಕೆ ಅನುಮತಿ ಕೋರಿಕೆ

ಕೊರೊನವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ನಗರಕ್ಕೆ ಆಗಮಿಸುವ ದೇಶೀಯ ವಿಮಾನಗಳ ಎಲ್ಲ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲು ರಾಜ್ಯ ಸರ್ಕಾರ ವಿಮಾನಯಾನ ನಿರ್ದೇಶನಾಲಯದ ಅನುಮತಿಯನ್ನು ಕೋರಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ವಿಧಾನಸಭೆಯಲ್ಲಿ ಬುಧವಾರ ತಿಳಿಸಿದ್ದಾರೆ. 
ವಿಧಾನಸಭೆಯಲ್ಲಿ ಸಚಿವ ಬಿ ಶ್ರೀರಾಮುಲು
ವಿಧಾನಸಭೆಯಲ್ಲಿ ಸಚಿವ ಬಿ ಶ್ರೀರಾಮುಲು

ಬೆಂಗಳೂರು: ಕೊರೊನವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ನಗರಕ್ಕೆ ಆಗಮಿಸುವ ದೇಶೀಯ ವಿಮಾನಗಳ ಎಲ್ಲ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲು ರಾಜ್ಯ ಸರ್ಕಾರ ವಿಮಾನಯಾನ ನಿರ್ದೇಶನಾಲಯದ ಅನುಮತಿಯನ್ನು ಕೋರಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ವಿಧಾನಸಭೆಯಲ್ಲಿ ಬುಧವಾರ ತಿಳಿಸಿದ್ದಾರೆ. 

ರಾಜ್ಯದಲ್ಲಿ ಕೊವಿದ್-19(ಕೊರೊನವೈರಸ್) ಉಲ್ಬಣ ಕುರಿತಂತೆ ನಡೆದ ಚರ್ಚೆಗೆ ಉತ್ತರಿಸಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ಆಗಮಿಸುವ ಪ್ರಯಾಣಿಕರಿಗೆ ಅಳವಡಿಸುವ ವಿಧಾನದ ಮಾದರಿಯಲ್ಲಿ ದೇಶೀಯ ವಿಮಾನಗಳ ಪ್ರಯಾಣಿಕರಿಗೂ ಅಳವಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. 

ಮಾರಣಾಂತಿಕ ವೈರಾಣು ಹರಡದಂತೆ ತಡೆಯಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದ ಅವರು, ಜಿಲ್ಲಾ ಮತ್ತು ತಾಲ್ಲೂಕು ಆಡಳಿತಗಳಲ್ಲದೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ರೋಗವನ್ನು ದೊಡ್ಡ ಸವಾಲಾಗಿ ಸ್ವೀಕರಿಸಿ, ಇದನ್ನು ತಡೆಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 

ಬೆಳಗಾವಿ, ಕಲಬುರಗಿ, ರಾಯಚೂರು, ಬಳ್ಳಾರಿ, ಮಂಗಳೂರು ಮತ್ತು ಶಿವಮೊಗ್ಗದಲ್ಲಿ ಪರಿಕ್ಷಾ ಸೌಲಭ್ಯಗಳನ್ನು ತೆರೆಯಲಾಗಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ. ಇದಕ್ಕೂ ಮುನ್ನ, ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ನ ಪ್ರಿಯಾಂಕ್ ಖರ್ಗೆ ಮತ್ತು ಅಜಯ್ ಸಿಂಗ್, ರೋಗದಿಂದ ರಾಜ್ಯದಲ್ಲಿ ಅನಾಹುತ ಸೃಷ್ಟಿಸುವ ಸಾಧ್ಯತೆ ಇದೆ ಎಂದು ಸದನದ ಗಮನವನ್ನು ಸೆಳೆದರು. 

ರಾಜ್ಯದಲ್ಲಿ ಜನರಿಗೆ ಹೆಚ್ಚಿನ ಹಾನಿ ತಡೆಯಲು ಪ್ರಯತ್ನಗಳನ್ನು ತೀವ್ರಗೊಳಿಸುವಂತೆ ಸರ್ಕಾರಕ್ಕೆ ಇಬ್ಬರೂ ಸದಸ್ಯರೂ ಮನವಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com