ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಎರಡೂವರೆ ವರ್ಷಕ್ಕೆ ಇಳಿಕೆ: ಮಸೂದೆ

ಜಿಲ್ಲಾ ಪಂಚಾಯಿತಿ, ತಾಲೂಕು ಮತ್ತು ಗ್ರಾಮ ಪಂಚಾಯಿತಿಗಳ  ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅಧಿಕಾರ ಅವಧಿಯನ್ನು ಎರಡೂವರೆ ವರ್ಷಗಳಿಗೆ ಇಳಿಸುವ ಸಂಬಂಧ ‘ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌  (ತಿದ್ದುಪಡಿ) ಮಸೂದೆ’ಯನ್ನು ವಿಧಾನಸಭೆಯಲ್ಲಿ  ಬುಧವಾರ ಮಂಡಿಸಲಾಯಿತು.
ಸಚಿವ ಕೆಎಸ್ ಈಶ್ವರಪ್ಪ
ಸಚಿವ ಕೆಎಸ್ ಈಶ್ವರಪ್ಪ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಮತ್ತು ಗ್ರಾಮ ಪಂಚಾಯಿತಿಗಳ  ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅಧಿಕಾರ ಅವಧಿಯನ್ನು ಎರಡೂವರೆ ವರ್ಷಗಳಿಗೆ ಇಳಿಸುವ ಸಂಬಂಧ ‘ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌  (ತಿದ್ದುಪಡಿ) ಮಸೂದೆ’ಯನ್ನು ವಿಧಾನಸಭೆಯಲ್ಲಿ  ಬುಧವಾರ ಮಂಡಿಸಲಾಯಿತು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್‌.ಈಶ್ವರಪ್ಪ ಮಸೂದೆ ಮಂಡಿಸಿದರು. ಮಸೂದೆಯಲ್ಲಿ ಒಟ್ಟು 36 ತಿದ್ದುಪಡಿಗಳನ್ನು ತರಲಾಗಿದೆ

ಈ ಮಸೂದೆ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಧಿಕಾರ  ಅವಧಿಯನ್ನು  ಐದು ವರ್ಷಗಳಿಂದ ಎರಡೂವರೆ ವರ್ಷಗಳಿಗೆ ಇಳಿಕೆ, ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಅಧಿಕಾರ ಸ್ವೀಕರಿಸಿದ ದಿನದಿಂದ 15 ತಿಂಗಳವೇ ಬಳಿಕ  ಅವಿಶ್ವಾಸ ಮಂಡಿಸಲು ಅವಕಾಶ ಕಲ್ಪಿಸಲಾಗಿದೆ

ತಾಲ್ಲೂಕು  ಪಂಚಾಯಿತಿಯಲ್ಲಿ ಅವಿಶ್ವಾಸ ಮಂಡಿಸಿದಾಗ ಆ ಪ್ರಕ್ರಿಯೆ ಪೂರ್ಣಗೊಳಿಸಲು ಡೆಪ್ಯುಟಿ  ಕಮಿಷನರ್‌ ಮತ್ತು ಜಿಲ್ಲಾ ಪಂಚಾಯಿತಿಯಲ್ಲಿ ಹಂತದಲ್ಲಿ ಪ್ರಾದೇಶಿಕ ಆಯುಕ್ತರೇ  ಅಧ್ಯಕ್ಷತೆ ವಹಿಸಬೇಕು ಎಂಬ ನಿಯಮ ಜಾರಿಗೊಳಿಸಲಾಗಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com