ಹೊರದೇಶದಿಂದ ಬಂದು ಮಾಹಿತಿ ನೀಡದಿದ್ದರೆ ಕಾನೂನು ಕ್ರಮ: ಡಿಸಿ ಶರತ್ 

ಎಲ್ಲೆಡೆ‌ ಕೊರೊನಾ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಹೊರದೇಶದಿಂದ ಬಂದವರು ತಪಾಸಣೆಗೆ ಒಳಪಡದೆ‌ ಮನೆಯಲ್ಲಿ ಗೌಪ್ಯವಾಗಿದ್ದರೇ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶರತ್.ಬಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಶರತ್ ಬಿ
ಶರತ್ ಬಿ

ಕಲಬುರಗಿ: ಎಲ್ಲೆಡೆ‌ ಕೊರೊನಾ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಹೊರದೇಶದಿಂದ ಬಂದವರು ತಪಾಸಣೆಗೆ ಒಳಪಡದೆ‌ ಮನೆಯಲ್ಲಿ ಗೌಪ್ಯವಾಗಿದ್ದರೇ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶರತ್ ಬಿ. ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೆಲಸಕ್ಕೆಂದು ಹೊರದೇಶಕ್ಕೆ ಹೋಗಿ ಕಳೆದ‌ ಒಂದು ತಿಂಗಳಿನಿಂದ ಇಂದಿನವರೆಗೂ ಜಿಲ್ಲೆಗೆ ವಾಪಸ್ಸಾದ ನಾಗರಿಕರು ಸ್ವಯಂಪ್ರೇರಿತರಾಗಿ ಕಲಬುರಗಿ ಇ.ಎಸ್.ಐ.ಸಿ. ಆಸ್ಪತ್ರೆಗೆ ಬಂದು ಕೊರೊನಾ ವೈರಸ್ ತಪಾಸಣೆಗೆ ಒಳಪಡಬೇಕು ಎಂದರು.

ಕೊರೊನಾ ವೈರಸ್ ಸೋಂಕು ಹೆಚ್ಚಾಗಿ ಹೊರದೇಶದಿಂದ‌ ಆಗಮಿಸಿದವರಲ್ಲೇ, ಕಂಡುಬರುತ್ತಿರುವುದರಿಂದ ಹೊರದೇಶದಿಂದ ಬಂದವರು ಮನೆಯಲ್ಲಿ ಗೌಪ್ಯವಾಗಿರಬಾರದು. ಕೂಡಲೇ ತಮ್ಮ ಪ್ರವಾಸದ ಇತಿಹಾಸದೊಂದಿಗೆ ಆಸ್ಪತ್ರೆಗೆ ತೆರಳಿ ತಪಾಸಣೆಗೊಳಪಡುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. 

ಇಲ್ಲದಿದ್ದಲ್ಲಿ ಸರ್ಕಾರದಿಂದಲೇ ಹೊರದೇಶದಿಂದ‌ ಮರಳಿದವರ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ವೈರಸ್ ಹರಡದಂತೆ ಅರೋಗ್ಯ ಇಲಾಖೆಯಿಂದ ಕಲಬುರಗಿ ನಗರದಲ್ಲಿ ಗಾಳಿಯಲ್ಲಿ ಔಷಧ ಸಿಂಪಡಿಸುತ್ತಿಲ್ಲ. 

ಸಾಮಾಜಿಕ ಜಾಲತಾಣಗಳಲ್ಲಿ ಇಂದು ರಾತ್ರಿ 10 ಗಂಟೆಯುಂದ ಬೆಳಿಗ್ಗೆ 5 ಗಂಟೆ ವರೆಗೆ ಗಾಳಿಯಲ್ಲಿ ಔಷಧ ಸಿಂಪಡಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಹೊರಗಡೆ ಬರಬಾರದು ಎಂಬುದು ಸುಳ್ಳು ಸುದ್ದಿ ಹರಿದಾಡುತ್ತಿದೆ. ಇಂತಹ ಊಹಾಪೋಹ ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದಿದ್ದಾರೆ.

ಆರೋಗ್ಯ ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ಇಂತಹ ಗಾಳಿ ಸುದ್ದಿಗಳಿಗೆ ಯಾರು ನಂಬಬಾರದು ಮತ್ತು ಅನಗತ್ಯ ಭಯಭೀತರಾಗಬಾರದು. ಜಿಲ್ಲಾಡಳಿತದಿಂದ ನೀಡಲಾಗುವ ಅಧಿಕೃತ ಮಾಹಿತಿಯನ್ನು ಮಾತ್ರ ಸಾರ್ವಜನಿಕರು ಪರಿಗಣಿಸಬೇಕು ಎಂದು ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com