ಆದ್ಯತಾ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ, 2 ಕೆ.ಜಿ ಗೋದಿ: ಸಚಿವ ಗೋಪಾಲಯ್ಯ

ರಾಜ್ಯದಲ್ಲಿ 2020-21ನೇ ಸಾಲಿನಿಂದ ಆದ್ಯತಾ ಪಡಿತರ ಚೀಟಿ ಹೊಂದಿರುವ ಕುಟುಂಬದ ಪ್ರತಿ ಸದಸ್ಯರುಗಳಿಗೆ 5 ಕೆ.ಜಿ ಅಕ್ಕಿ ಹಾಗೂ ಪ್ರತಿ ಕುಟುಂಬಕ್ಕೆ 2 ಕೆ.ಜಿ ಗೋದಿ ವಿತರಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ....
ವಿಧಾನಸಭೆ
ವಿಧಾನಸಭೆ

ಬೆಂಗಳೂರು: ರಾಜ್ಯದಲ್ಲಿ 2020-21ನೇ ಸಾಲಿನಿಂದ ಆದ್ಯತಾ ಪಡಿತರ ಚೀಟಿ ಹೊಂದಿರುವ ಕುಟುಂಬದ ಪ್ರತಿ ಸದಸ್ಯರುಗಳಿಗೆ 5 ಕೆ.ಜಿ ಅಕ್ಕಿ ಹಾಗೂ ಪ್ರತಿ ಕುಟುಂಬಕ್ಕೆ 2 ಕೆ.ಜಿ ಗೋದಿ ವಿತರಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಸಚಿವ ಕೆ.ಗೋಪಾಲಯ್ಯ ಅವರು ಶುಕ್ರವಾರ ವಿಧಾನಸಭೆಗೆ ತಿಳಿಸಿದರು.

ಜೆಡಿಎಸ್ ಅರಕಲಗೂಡು ಶಾಸಕ ರಾಮಸ್ವಾಮಿ.ಎ.ಟಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆಯವ್ಯಯದಲ್ಲಿ ಘೋಷಿಸಿದಂತೆ ಪಡಿತರ ಧಾನ್ಯ ವಿತರಿಸಲಾಗುತ್ತಿದೆ. 2019-20ನೇ ಸಾಲಿನಲ್ಲಿ ರಾಜ್ಯದಲ್ಲಿನ ಪಡಿತರ ಚೀಟಿದಾರರಿಗೆ ಸಾರ್ವಜನಿಕ ವಿತರಣಾ ಪದ್ದತಿಯಡಿ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಅಂತ್ಯೋದಯ ಪಡಿತರ ಚೀಟಿಗೆ 35 ಕೆ.ಜಿ. ಅಕ್ಕಿ ಹಾಗೂ ಆದ್ಯತಾ ಪಡಿತರ ಚೀಟಿ ಹೊಂದಿರುವ ಕುಟುಂಬದ ಪ್ರತಿ ಸದಸ್ಯನಿಗೆ 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದರು. 

ಆದ್ಯತೇತರ ಪಡಿತರ ಚೀಟಿ ಹೊಂದಿದ್ದು, ಪಡಿತರ ಧಾನ್ಯ ಪಡೆಯಲು ಸಹಮತಿ ನೀಡಿರುವ ಏಕ ಸದಸ್ಯ ಪಡಿತರ ಕುಟುಂಬಕ್ಕೆ 5 ಕೆ.ಜಿ ಅಕ್ಕಿ, ಇಬ್ಬರು ಹಾಗೂ ಅದಕ್ಕಿಂತ ಹೆಚ್ಚಿನ ಸದಸ್ಯರು ಹೊಂದಿರುವ ಪಡಿತರ ಕುಟುಂಬಕ್ಕೆ 10 ಕೆ.ಜಿ ಅಕ್ಕಿಯನ್ನು 15 ರೂ. ದರದಲ್ಲಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com