ಕೊಲೆ ಪ್ರಕರಣದ ಆರೋಪಿ ಗೋವರ್ಧನ ಮೂರ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ನಟ ವಿನೋದ್ ಕುಮಾರ್ ಶೂಟೌಟ್ ಪ್ರಕರಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಗೋವರ್ಧನ ಮೂರ್ತಿಗೆ ಜೀವಾವಧಿ ಶಿಕ್ಷೆ ಮತ್ತು ₹ 5 ಐದು ಲಕ್ಷ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಪ್ಪಿತಸ್ಥ ಎಂದು  ತೀರ್ಪು ನೀಡಿದೆ.
ಗೋವರ್ಧನ ಮೂರ್ತಿ
ಗೋವರ್ಧನ ಮೂರ್ತಿ

ಬೆಂಗಳೂರು: ನಟ ವಿನೋದ್ ಕುಮಾರ್ ಶೂಟೌಟ್ ಪ್ರಕರಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಗೋವರ್ಧನ ಮೂರ್ತಿಗೆ ಜೀವಾವಧಿ ಶಿಕ್ಷೆ ಮತ್ತು ₹ 5 ಐದು ಲಕ್ಷ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಪ್ಪಿತಸ್ಥ ಎಂದು  ತೀರ್ಪು ನೀಡಿದೆ.

2008ರಲ್ಲಿ ತೀವ್ರ  ಸಂಚಲನ ಉಂಟು ಮಾಡಿದ್ದ ಈ ಪ್ರಕರಣದಲ್ಲಿ ಗೋವರ್ಧನ ಮೂರ್ತಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.  

ಮೇಲ್ಮನವಿ ವಿಚಾರಣೆ  ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್.ಎನ್. ಸತ್ಯನಾರಾಯಣ ಮತ್ತು ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com