ಶುಲ್ಕ ವಿವರ ನೀಡದ ಖಾಸಗಿ ಶಾಲೆಗಳ ವಿರುದ್ಧ ದಂಡ ಹಾಕಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ 

ಖಾಸಗಿ ಶಾಲೆಗಳಲ್ಲಿ ಮಕ್ಕಳ ಪೋಷಕರಿಂದ ತೆಗೆದುಕೊಳ್ಳುವ ಶುಲ್ಕದ ವಿವರ, ಶಿಕ್ಷಕ-ಶಿಕ್ಷಕಿಯರ ಮಾಹಿತಿ, ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾದ ಖಾಸಗಿ ಶಾಲೆಗಳ ವಿರುದ್ಧ ದಂಡ ಹಾಕಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.
ಶುಲ್ಕ ವಿವರ ನೀಡದ ಖಾಸಗಿ ಶಾಲೆಗಳ ವಿರುದ್ಧ ದಂಡ ಹಾಕಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ 

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಮಕ್ಕಳ ಪೋಷಕರಿಂದ ತೆಗೆದುಕೊಳ್ಳುವ ಶುಲ್ಕದ ವಿವರ, ಶಿಕ್ಷಕ-ಶಿಕ್ಷಕಿಯರ ಮಾಹಿತಿ, ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾದ ಖಾಸಗಿ ಶಾಲೆಗಳ ವಿರುದ್ಧ ದಂಡ ಹಾಕಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.


ಶಿಕ್ಷಣ ಇಲಾಖೆ ವೆಬ್ ಸೈಟ್ ನಲ್ಲಿ ದಂಡದ ವಿವರಣೆ ಅಪ್ ಲೋಡ್ ಮಾಡಲು 6 ವಾರಗಳ ಸಮಯಾವಕಾಶ ನೀಡಿರುವ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠ ಅಡ್ವೊಕೇಟ್ ಎನ್ ಪಿ ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ತೀರ್ಪು ನೀಡಿತು.


ಈ ಮಧ್ಯೆ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ವಿವರಣೆ ನೀಡಿ ಕರ್ನಾಟಕ ಶಿಕ್ಷಣ ಕಾಯ್ದೆಗೆ 2017ರಲ್ಲಿ ತಿದ್ದುಪಡಿ ತಂದಿದ್ದು ಸೆಕ್ಷನ್ 112 ಎಯನ್ನು ಜಾರಿಗೆ ತರಲಾಗಿದೆ ಎಂದಿದೆ.


ಈ ತಿದ್ದುಪಡಿ ಪ್ರಕಾರ, ವಿದ್ಯಾರ್ಥಿಗಳ ಸುರಕ್ಷತೆ, ಭದ್ರತೆ ವಿಚಾರದಲ್ಲಿ ಯಾವುದೇ ಲೋಪದೋಷಗಳನ್ನು ಉಂಟುಮಾಡಿದರೆ 1 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ. ಜೊತೆಗೆ ಶಾಲೆಯ ವ್ಯವಸ್ಥಾಪಕ ಮಂಡಳಿಯ ಉದ್ಯೋಗಿ ಅಥವಾ ಸದಸ್ಯರಿಗೆ ಕನಿಷ್ಠ 6 ತಿಂಗಳು ಶಿಕ್ಷೆ ನೀಡಲಾಗುತ್ತದೆ.


ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ನಡೆಸಿದ ವಿಚಾರಣೆಯ ವೇಳೆ ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ ಶಿಕ್ಷಣ ಸಂಸ್ಥೆಯ ಮಾನ್ಯತೆ ರದ್ದುಪಡಿಸಬಹುದು ಮತ್ತು 10 ಲಕ್ಷ ರೂಗಳವರೆಗೆ ದಂಡ ವಿಧಿಸಬಹುದು. ಹೆಚ್ಚುವರಿ ಶುಲ್ಕವನ್ನು ಮರುಪಾವತಿಸಬೇಕು ಎಂದು ಕಾಯ್ದೆ ಹೇಳುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com