ನಾಳೆ ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ಕೇಸ್ ದಾಖಲಿಸುತ್ತೇವೆ: ಭಾಸ್ಕರ್ ರಾವ್ ಎಚ್ಚರಿಕೆ

ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿದ್ದು, ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬಂದರೆ ಪ್ರಕರಣ ದಾಖಲಿಸಿ....
ಭಾಸ್ಕರ್ ರಾವ್
ಭಾಸ್ಕರ್ ರಾವ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿದ್ದು, ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬಂದರೆ ಪ್ರಕರಣ ದಾಖಲಿಸಿ, ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಶನಿವಾರ ಎಚ್ಚರಿಸಿದ್ದಾರೆ.

ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಬರಬಾರದು. ತೀರಾ ಅಗತ್ಯ ಇದ್ದರೆ ಮಾತ್ರ ಬನ್ನಿ. ಅನಗತ್ಯವಾಗಿ ಬೀದಿಗೆ ಬಂದು ಗುಂಪು ಸೇರುವುದು, ನಿಂತುಕೊಳ್ಳುವುದು, ಟೈಂಪಾಸ್ ಮಾಡುವುದು ಮಾಡಿದರೆ ಕೇಸ್‌ ದಾಖಲಿಸಲಾಗುತ್ತದೆ. ಸಾರ್ವಜನಿಕರು ಜನತಾ ಕರ್ಫ್ಯೂವನ್ನು ಬಹಳ ಗಂಭಿರವಾಗಿ ಪರಿಗಣಿಸಬೇಕು ಎಂದು ಭಾಸ್ಕರ್ ರಾವ್ ಹೇಳಿದ್ದಾರೆ.

ದೇಶಾದ್ಯಂತ ಕೊರೋನಾ ವೈರಸ್ ತೀವ್ರವಾಗಿ ಹರಡುತ್ತಿದ್ದು, ಇದನ್ನು ತಡೆಯಲು ಜನ ನಾಳೆ ಮನೆಯಲ್ಲಿಯೇ ಇರಬೇಕು, ಪ್ರವಾಸ, ವಾಕಿಂಗ್, ಕಾರ್ಯಕ್ರಮ ಅಂತ ಓಡಾಡುವಂತಿಲ್ಲ. ರಸ್ತೆ ಮೇಲೆ ತಿರುಗಾಡುತ್ತಿದ್ದರೆ 31(L) ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಜೊತೆ ಮಾತುಕತೆ ನಡೆಸಿದ್ದೇವೆ ಎಂದರು.

ಇನ್ನು ಕೊರೋನಾ ಸೋಂಕಿತರು ವಿಷಯ ಮುಚ್ಚಿಡುತ್ತಿರುವುದು ಬೆಳಕಿಗೆ ಬರುತ್ತಿದೆ. ಅಂಥವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತೆ. ಬೆಂಗಳೂರಿನಲ್ಲಿ ಎಲ್ಲಾ ಕಡೆ ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸರು ಗಸ್ತಿನಲ್ಲಿರುತ್ತಾರೆ. ಈಗಾಗಲೇ ಸಭೆ ನಡೆಸಿ ಎಲ್ಲಾ ಡಿಸಿಪಿಗಳಿಗೆ ಸೂಚನೆ‌ ನೀಡಲಾಗಿದ್ದು, ಹೊರಗಡೆ ಇರುವ ಪ್ರತಿ ಸಿಬ್ಬಂದಿಗೂ ಮಾಸ್ಕ್, ಸ್ಯಾನಿಟೈಸರ್ ನೀಡಲು ಹೇಳಿದ್ದೇನೆ ಎಂದು ಭಾಸ್ಕರ್‌ ರಾವ್‌ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com