ರಾಜ್ಯ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ರಾಜೀನಾಮೆ: ಸೌಮ್ಯಾರೆಡ್ಡಿ 

ವಿವಾದಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಜಾರಿಗೆ ಇದ್ದ ತೊಡಕು ನಿವಾರಿಸಲು ರಾಜ್ಯದ ವನ್ಯಜೀವಿ ಮಂಡಳಿ ತೀರ್ಮಾನಿಸಿರುವ ಕಾರಣ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ಜಯನಗರ ಶಾಸಕಿ ಸೌಮ್ಯರೆಡ್ಡಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಸೌಮ್ಯರೆಡ್ಡಿ
ಸೌಮ್ಯರೆಡ್ಡಿ

ಬೆಂಗಳೂರು: ವಿವಾದಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಜಾರಿಗೆ ಇದ್ದ ತೊಡಕು ನಿವಾರಿಸಲು ರಾಜ್ಯದ ವನ್ಯಜೀವಿ ಮಂಡಳಿ ತೀರ್ಮಾನಿಸಿರುವ ಕಾರಣ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ಜಯನಗರ ಶಾಸಕಿ ಸೌಮ್ಯರೆಡ್ಡಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಈ ಕುರಿತ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಾ.9 ರಂದು ನಡೆದ 14ನೇ ವನ್ಯಜೀವಿ ಮಂಡಳಿ ಸಭೆಯಲ್ಲಿ ಪರಿಸರವಾದಿಗಳು ಮತ್ತು ಮಂಡಳಿಯ ಕೆಲ ಸದಸ್ಯರಿಂದ ತೀವ್ರ ವಿರೋಧಕ್ಕೊಳಗಾಗಿದ್ದ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. 

ಪರಿಸರವಾದಿಗಳ ವಿರೋಧದ ಮಧ್ಯೆಯೂ ಯೋಜನೆ ಪರ ತೀರ್ಮಾನ ಕೈಗೊಳ್ಳಲಾಗಿದ್ದು, ಯೋಜನೆ ಬೆಂಬಲಿಸಿ ಕೇಂದ್ರಕ್ಕೆ ಶಿಫಾರಸು ಮಾಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಹಲವಾರು ರಾಜಕೀಯ ಒತ್ತಡಗಳಿಂದ ಹಾಗೂ ಕಾಣದ ಕೈಗಳ ಕೈವಾಡದಿಂದ ಮತ್ತೆ ಯೋಜನೆ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಮತ್ತೊಮ್ಮೆ ಸಭೆ ನಡೆಸಿದ್ದಾರೆ.

ಬೇರೆ ಮಾರ್ಗವಿದ್ದರೂ ಈ ಯೋಜನೆಯನ್ನು ಏಕೆ ಮಾಡಿದ್ದು ಹಾಗೂ ಸಭೆಯಲ್ಲಿ ಅರಣ್ಯ ಸಚಿವರೇ ಗೈರು ಹಾಜರಾಗಿದ್ದರು. ರಾಜ್ಯ ವನ್ಯಜೀವಿ ಮಂಡಳಿ ಅಸ್ತಿತ್ವದಲ್ಲಿದ್ದರೂ ಪ್ರಯೋಜನವಿಲ್ಲದಂತಾಗಿದೆ. ಈ ಯೋಜನೆ ಜಾರಿಗೆ ಬಂದರೆ ಮರಗಳ ಮಾರಣಹೋಮದಿಂದ ಮುಂದೆ ಪರಿಸರದ ಮೇಲಾಗುವ ದುಷ್ಪರಿಣಾಮಗಳಿಗೆ ಸರ್ಕಾರದ ಈ ನಿರ್ಧಾರವೇ ಕಾರಣವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com