ಸಿಸಿಬಿ ಪೊಲೀಸರಿಂದ ಮೂವರು ಸದಸ್ಯರ ಇರಾನಿ ಗ್ಯಾಂಗ್‌ ಬಂಧನ: 40 ಲಕ್ಷ ರೂ. ಮೌಲ್ಯದ ಚಿನ್ನದ ಸರಗಳು ವಶ

ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಓರ್ವ ಮಹಿಳೆ ಸೇರಿದಂತೆ ಮೂವರು ಸದಸ್ಯರ ಇರಾನಿ ಗ್ಯಾಂಗ್ ಅನ್ನು ಬಂಧಿಸಿ ಅವರಿಂದ ಕದ್ದಿದ್ದ 40 ಲಕ್ಷ ರೂ ಮೌಲ್ಯದ 1 ಕೆಜಿ 33 ಗ್ರಾಂ ಕದ್ದ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದಾರೆ.  
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಓರ್ವ ಮಹಿಳೆ ಸೇರಿದಂತೆ ಮೂವರು ಸದಸ್ಯರ ಇರಾನಿ ಗ್ಯಾಂಗ್ ಅನ್ನು ಬಂಧಿಸಿ ಅವರಿಂದ ಕದ್ದಿದ್ದ 40 ಲಕ್ಷ ರೂ ಮೌಲ್ಯದ 1 ಕೆಜಿ 33 ಗ್ರಾಂ ಕದ್ದ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದಾರೆ. 

ಬಂಧಿತರನ್ನು ಅಬುಜರ್, ಅಬ್ದುಲ್ ಹುಸೇನ್ ಮತ್ತು ಜೆನಿಯಾ ಎಂದು ಗುರುತಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಶನಿವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇವರೆಲ್ಲರೂ ಮಧ್ಯಪ್ರದೇಶದ ಭೋಪಾಲ್ ಮೂಲದವರಾಗಿದ್ದಾರೆ.

ಬಂಧನಕ್ಕೊಳಗಾದ ಅಪರಾಧಿಗಳು ಇದೇ ರೀತಿಯ ಕಳ್ಳತನ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗಿದ್ದು, ಅಪರಾಧ ಚಟುವಟಿಕೆಗಳನ್ನು ಮುಂದುವರೆಸಿದ್ದಾರೆ. ಈ ತಂಡ 23 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. 

ತಂಡದ ಸದಸ್ಯರು ಮಧ್ಯಪ್ರದೇಶದಿಂದ ಮಹಾರಾಷ್ಟ್ರ ಮೂಲಕ ನಗರಕ್ಕೆ ಆಗಮಿಸುತ್ತಿದ್ದರು. ಅಪರಾಧ ಮಾಡಿದ ನಂತರ ಅವರು ತಮ್ಮ ಸ್ವಂತ ಸ್ಥಳಗಳಿಗೆ ಹಿಂದಿರುಗುತ್ತಿದ್ದರು. ಬೆಲೆಬಾಳುವ ವಸ್ತುಗಳನ್ನು ದೋಚುವ ಮೊದಲು ವಯಸ್ಸಾದ ಮತ್ತು ಒಂಟಿಯಾಗಿರುವ ಮಹಿಳೆಯರನ್ನು ಗುರಿಯಾಗಿಸಿಕೊಳ್ಳುತ್ತಿದ್ದರು ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com