ಕಲಬುರಗಿಯಲ್ಲಿ ಮತ್ತೆ ಮೂರು ದಿನ 144 ನಿಷೇಧಾಜ್ಞೆ: ಜಿಲ್ಲಾಧಿಕಾರಿ  ಶರತ್. ಬಿ

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ ವೃದ್ಧರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಇದೇ ತಿಂಗಳ 19ರಂದು ರಾತ್ರಿಯಿಂದ ಭಾನುವಾರ ರಾತ್ರಿ 8ಗಂಟೆವರೆಗೆ ಒಟ್ಟು ಮೂರು ದಿನಗಳ ಕಾಲ 144 ನಿಷೇಧಾಜ್ಞೆ ಹೇರಲಾಗಿತ್ತು ಎಂದು ಹೇಳಿದ್ದಾರೆ. 

Published: 22nd March 2020 01:22 PM  |   Last Updated: 22nd March 2020 01:24 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : UNI

ಕಲಬುರಗಿ: ಕೊರೋನಾ ವೈರಸ್‌ ನಿಯಂತ್ರಿಸಲು ಜಿಲ್ಲೆಯಾದ್ಯಂತ ಮತ್ತೆ ಮೂರು ದಿನಗಳ ಕಾಲ 144 ನಿಷೇಧಾಜ್ಞೆ ಮುಂದುವರೆಸಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶಿಸಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ ವೃದ್ಧರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಇದೇ ತಿಂಗಳ 19ರಂದು ರಾತ್ರಿಯಿಂದ ಭಾನುವಾರ ರಾತ್ರಿ 8ಗಂಟೆವರೆಗೆ ಒಟ್ಟು ಮೂರು ದಿನಗಳ ಕಾಲ 144 ನಿಷೇಧಾಜ್ಞೆ ಹೇರಲಾಗಿತ್ತು ಎಂದರು.

ಕೊರೊನಾ ಸೋಂಕು ನಿಯಂತ್ರಿಸಲು ಜನದಟ್ಟಣೆ ಕಡಿಮೆ ಮಾಡುವುದು ಅನಿವಾರ್ಯವಾಗಿದ್ದರಿಂದ ಮತ್ತೆ ಜಿಲ್ಲೆಯಾದ್ಯಂತ ಮಾ. 25ರ ರಾತ್ರಿ 8ಗಂಟೆವರೆಗೆ ಮೂರು ದಿನಗಳ ಕಾಲ ಸಿಆರ್ ಪಿಸಿ ಕಾಯ್ದೆ 1973ರ ಕಲಂ144ರ ಅನ್ವಯ ನಿಷೇಧಾಜ್ಞೆ ಮುಂದುವರೆಸಲು ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp