ಕೊರೋನಾವೈರಸ್: ಮಾರ್ಚ್ 31ರವರೆಗೂ ಎಲ್ಲಾ ಶಿಕ್ಷಕರು ಮನೆಯಿಂದಲೇ ಕೆಲಸ

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಒಂದರಿಂದ ಆರನೇ ತರಗತಿವರೆಗಿನ ತರಗತಿಗಳು ರದ್ದುಗೊಂಡ ಬೆನ್ನಲ್ಲೇ , ಏಳು ಮತ್ತು 10ನೇ ತರಗತಿಯನ್ನು ಮುಂದೂಡಲಾಗಿರುವ ಸರ್ಕಾರ ಇದೀಗ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಎಲ್ಲಾ ಶಿಕ್ಷಕರು ಮಾರ್ಚ್ 31ರವರೆಗೂ ಮನೆಯಿಂದಲೇ ಕೆಲಸ ಮಾಡುವಂತೆ ನಿರ್ದೇಶಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಒಂದರಿಂದ ಆರರವರೆಗಿನ ತರಗತಿಗಳು ರದ್ದುಗೊಂಡ ಬೆನ್ನಲ್ಲೇ , ಏಳು ಮತ್ತು 10ನೇ ತರಗತಿಯನ್ನು ಮುಂದೂಡಲ್ಪಟ್ಟಿರುವ ಸರ್ಕಾರ ಇದೀಗ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಎಲ್ಲಾ ಶಿಕ್ಷಕರು ಮಾರ್ಚ್ 31ರವರೆಗೂ ಮನೆಯಿಂದಲೇ ಕೆಲಸ ಮಾಡುವಂತೆ ನಿರ್ದೇಶಿಸಿದೆ.

ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ, ಗುತ್ತಿಗೆ ಶಿಕ್ಷಕರು ಸೇರಿದಂತೆ ಸರ್ಕಾರಿ ಶಿಕ್ಷಣ ಸಂಸ್ಥೆಯಲ್ಲಿನ ಎಲ್ಲಾರಿಗೂ  ಈ ಅವಧಿಯನ್ನು ಕರ್ತವ್ಯದ ದಿನವೆಂದು ಪರಿಗಣಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಶಿಕ್ಷಣ ಇಲಾಖೆಯ ಎಲ್ಲಾ ಉಪ ಆಯುಕ್ತರು, ಬಿಇಓ ಹಾಗೂ ಮುಖ್ಯ ಶಿಕ್ಷಕರಿಗೆ ಈ ಸುತ್ತೋಲೆಯನ್ನು ಕಳುಹಿಸಲಾಗಿದೆ,

ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರಿ ಪಿಯು ಕಾಲೇಜುಗಳ ಎಲ್ಲಾ ಬೋಧಕರು, ಬೋಧಕೇತರ ಸಿಬ್ಬಂದಿಗಳಿಗೂ ಮನೆಯಿಂದಲೇ ಕೆಲಸಕ್ಕೆ ಅವಕಾಶವಿರಲಿದೆ. ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಲಾಗಿದ್ದು, ನೂತನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com