ಕೋವಿಡ್ -19, ಬೆಳಗಾವಿಯಲ್ಲಿ ಐದೂ ಪ್ರಕರಣಗಳ ವರದಿ ನೆಗೆಟಿವ್- ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ

 ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲಾ 5 ಮಾದರಿ ವರದಿಗಳು ಬಂದಿದ್ದು, ಯಾರಿಗೂ ಸೋಂಕು ತಗುಲಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ:  ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲಾ 5 ಮಾದರಿ ವರದಿಗಳು ಬಂದಿದ್ದು, ಯಾರಿಗೂ ಸೋಂಕು ತಗುಲಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಒಟ್ಟಾರೆ ಐದು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಇದೀಗ ಪ್ರಯೋಗಾಲಯದಿಂದ ಲಭಿಸಿರುವ ವರದಿ ಪ್ರಕಾರ ಎಲ್ಲ ಐದೂ ಮಾದರಿಗಳ ಫಲತಾಂಶ ನೆಗೆಟಿವ್ ಬಂದಿವೆ ಎಂದರು.

ಎರಡು ಮಾದರಿ ಬೆಂಗಳೂರು ಹಾಗೂ ಮೂರು ಮಾದರಿಗಳನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com