ಮೈಸೂರು: ವಿಮಾನ ನಿಲ್ದಾಣದಲ್ಲೇ ಕೊರೋನಾ ಲಕ್ಷಣಗಳು ಕಂಡು ಬಂದಿದ್ದರೂ ರೋಗಿಯನ್ನು ಮನೆಗೆ ಕಳುಹಿಸಿದ ಅಧಿಕಾರಿಗಳು!

ವಿಮಾನ ನಿಲ್ದಾಣದಲ್ಲಿಯೇ ಮೈಸೂರು ಮೂಲಕ ವ್ಯಕ್ತಿಯೊಬ್ಬರಿಗೆ ಕೊರೋನಾ ವೈರಸ್ ಲಕ್ಷಣಗಳು ಕಂಡು ಬಂದಿದ್ದರೂ ಬೇಜವಾಬ್ದಾರಿಯುತ ಅಧಿಕಾರಿಗಳು ಆತನನ್ನು ಮನೆಗೆ ಕಳುಹಿಸಿರುವ ಆಘಾತಕಾರಿ ಘಟನೆ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ವಿಮಾನ ನಿಲ್ದಾಣದಲ್ಲಿಯೇ ಮೈಸೂರು ಮೂಲಕ ವ್ಯಕ್ತಿಯೊಬ್ಬರಿಗೆ ಕೊರೋನಾ ವೈರಸ್ ಲಕ್ಷಣಗಳು ಕಂಡು ಬಂದಿದ್ದರೂ ಬೇಜವಾಬ್ದಾರಿಯುತ ಅಧಿಕಾರಿಗಳು ಆತನನ್ನು ಮನೆಗೆ ಕಳುಹಿಸಿರುವ ಆಘಾತಕಾರಿ ಘಟನೆ ನಡೆದಿದೆ. 

ದುಬೈನಿಂದ ಬಂದ ವ್ಯಕ್ತಿ ಮಾರ್ಚ್ 20ರ ಬೆಳಿಗ್ಗೆ 5.50ರ ಸುಮಾರಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ಈ ವೇಳೆ ತಪಾಸಣೆ ನಡೆಸಿರುವ ಅಧಿಕಾರಿಗಳು, ವೈರಸ್ ಲಕ್ಷಣಗಳು ಕಂಡು ಬಂದಿದ್ದರೂ ಮೈಸೂರಿಗೆ ತೆರಳಲು ಅವಕಾಶ ಮಾಡಿಕೊಂಡಿದ್ದಾರೆ. 

ಇದೀಗ ವ್ಯಕ್ತಿಯನ್ನು ಆಕಾಶ್ ಇಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್'ಗೆ ಸ್ಥಳಾಂತರಿಸಲಾಗಿದ್ದು, ಪ್ರತ್ಯೇಕ ಕೊಠಡಿಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. 

ಮೂಲಗಳ ಪ್ರಕಾರ ವೈರಸ್ ಲಕ್ಷಣಗಳು ಕಂಡು ಬಂದಿದ್ದರೂ ಆಸ್ಪತ್ರೆಯೇ ರೋಗಿಯನ್ನು ಮನೆಗೆ ಕಳುಹಿಸಿತ್ತು ಎಂದು ಹೇಳಲಾಗುತ್ತಿದೆ. ಮೈಸೂರಿಗೆ ಟ್ಯಾಕ್ಸಿ ಮೂಲಕ ಬಂದಿರುವ ವ್ಯಕ್ತಿ ಬಳಿಕ ಕೆ.ಆರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಕೊರೋನಾ ದೃಢಪಟ್ಟಿದೆ ಎನ್ನಲಾಗುತ್ತಿದೆ. 

ಘಟನೆ ನಿಜಕ್ಕೂ ಆಶ್ಚರ್ಯವನ್ನು ತರಿಸಿದೆ. ಈ ರೀತಿ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಮೈಸೂರು ಉಪ ಆಯುಕ್ತ ಅಭಿರಾಮ್ ಜಿ.ಶಂಕರ್ ಅವರು ರಾಜ್ಯ ಅಧಿಕಾರಿಗಲೆ ಪತ್ರವೊಂದನ್ನು ಬರೆಸಿದ್ದಾರೆ. 

ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ವ್ಯಕ್ತಿ ಯಾರನ್ನು ಸಂಪರ್ಕಿಸಿದ್ದರು ಎಂಬುದರ ಮಾಹಿತಿಯನ್ನು ಕಲೆ ಹಾಕಲಾಗಿದೆ. ಅದರಂತೆ 13 ಮಂದಿಯೊಂದಿಗೆ ವ್ಯಕ್ತಿ ಸಂಪರ್ಕ ಸಾಧಿಸಿದ್ದು, ಮಂಡ್ಯ ಸಮೀಪ ಟೀ ಕುಡಿಯುವಾಗ ಇಬ್ಬರು, ಚಿಕ್ಕಬಳ್ಳಾಪುರದ ಒಬ್ಬರು ಮತ್ತು ಮೈಸೂರಿನ 10 ಮಂದಿಯೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಹೇಳಲಾಗುತ್ತಿದೆ. 

ಈ ಪೈಕಿ ನಾಲ್ವರನ್ನು ಹೈರಿಸ್ಕ್ ಎಂದು ಗುರುತಿಸಲಾಗಿದ್ದು, 9 ಮಂದಿಯನ್ನು ಲೋ ರಿಸ್ಕ್ ಎಂದು ಗುರುತಿಸಿ ಚಿಕಿತ್ಸೆನೀಡಲಾಗುತ್ತಿದೆ. 

ಇದರಲ್ಲಿ ಅವರ ಆರೋಗ್ಯ ತಪಾಸಣೆ ನಡೆಸಿದ ಆಸ್ಪತ್ರೆ ಸಿಬ್ಬಂದಿಯೂ ಸೇರಿದ್ದಾರೆ. ಸೋಂಕಿತ ವ್ಯಕ್ತಿಯು ಹೇಳುವಂತೆ ಅವರು ಮನೆಗೆ ತೆರಳಿಲ್ಲ ಎಂದು ಖಚಿತಪಡಿಸಿದ್ದರೆ. ಆದರೆ, ಅವಕ ಅಕ್ಕಪಕ್ಕದ ಮನೆಯವರು ಬಂದಿದ್ದರು ನೋಡಿದ್ದೇವೆಂದು ಹೇಳುತ್ತಿದ್ದಾರೆ. ಇದರಿಂದ ನಾವು ಮತ್ತಷ್ಟು ಪರಿಶೀಲನೆ ನಡೆಸಿದ್ದೇವೆಂದು ಅಧಿಕಾರಿಗಳು ಹೇಳಿದ್ದಾರೆ 

ಈ ನಡುವೆ ಸೋಂಕಿತ ವ್ಯಕ್ತಿಯ ಹೆಸರು ಮತ್ತು ವಿಳಾಸ ಬಹಿರಂಗಪಡಿಸಿದವರನ್ನು ಅಮಾನತುಗೊಳಿಸಲಾಗಿದೆ. ಒಬ್ಬರು ಆರೋಗ್ಯ ಇಲಾಖೆ ಸಿಬ್ಬಂದಿ, ಮತ್ತೊಬ್ಬರು ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಜೊತಗೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com