ವದಂತಿಗೆ ಕಿವಿಕೊಡಬೇಡಿ:  ವೆನ್ಲಾಕ್ ಆಸ್ಪತ್ರೆಗೆ ಭೇಟಿ ನಂತರ  ಸಂಸದ ಕಟೀಲ್  ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರಿನ ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕೊರೋನಾ ಚಿಕಿತ್ಸಾ ವಾರ್ಡ್ ಹಾಗೂ ಕೊರೋನಾ ಶಂಕಿತರ ತಪಾಸಣೆಗೆ ಆಸ್ಪತ್ರೆಯಲ್ಲಿ ಕೈಗೊಳ್ಳಲಾಗಿರುವ ವ್ಯವಸ್ಥೆ ಗಳ ಬಗ್ಗೆ ಪರಿಶೀಲನೆ ನಡೆಸಿದರು.
ಆಸ್ಪತ್ರೆಗೆ ನಳಿನ್ ಕುಮಾರ್ ಕಟೀಲ್ ಭೇಟಿ
ಆಸ್ಪತ್ರೆಗೆ ನಳಿನ್ ಕುಮಾರ್ ಕಟೀಲ್ ಭೇಟಿ

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರಿನ ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕೊರೋನಾ ಚಿಕಿತ್ಸಾ ವಾರ್ಡ್ ಹಾಗೂ ಕೊರೋನಾ ಶಂಕಿತರ ತಪಾಸಣೆಗೆ ಆಸ್ಪತ್ರೆಯಲ್ಲಿ ಕೈಗೊಳ್ಳಲಾಗಿರುವ ವ್ಯವಸ್ಥೆ ಗಳ ಬಗ್ಗೆ ಪರಿಶೀಲನೆ ನಡೆಸಿದರು.

ಕೊರೋನ ವೈರಸ್ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಆತಂಕದ ನಡುವೆಯೂ ಸಾಮಾಜಿಕ ಜಾಲತಾಣಗಳಲ್ಲಿ ವೆನ್ಲಾಕ್ ಆಸ್ಪತ್ರೆ ಬಗ್ಗೆ ಅಪಪ್ರಚಾರ ನಡೆಸಿರುವ ಘಟನೆ ಸೋಮವಾರ ನಡೆದಿದ್ದ ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್ ಅವರು  ಆಸ್ಪತ್ರೆಗೆ ತೆರಳಿ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ಇತರ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು.

ಸಂಸದರಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಕರೋನ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕರೋನ ಪಾಸಿಟಿವ್ ಪತ್ತೆಯಾಗಿದ್ದು, ಇನ್ನೊಬ್ಬ ಕೊರೋನ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು.

ಜನರು ಊಹಾಪೋಹಗಳನ್ನು ನಂಬದಂತೆ, ಜಿಲ್ಲಾಡಳಿತ, ರಾಜ್ಯ, ರಾಷ್ಟ್ರ ಸಂಪೂರ್ಣವಾಗಿ ಜನರ ಆರೋಗ್ಯ ಕಾಳಜಿಗೆ ಕಟಿಬದ್ಧವಾಗಿದೆ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.

ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳು: ಮಂಗಳೂರಿನ ವೆನ್‍ಲಾಕ್  ಜಿಲ್ಲಾ  ಆಸ್ಪತ್ರೆಯಲ್ಲಿ ಕೋವಿಡ್-19 ಸಂಶಾಯಾಸ್ಪದ ಪ್ರಕರಣಗಳಿಗೆ 8 ವಿಶೇಷ ಪ್ರತ್ಯೇಕ  ಕೊಠಡಿಗಳನ್ನು ಕಾದಿರಿಸಲಾಗಿದೆ. ಸಂಶಯಾಸ್ಪದ ಪ್ರಕರಣಗಳು ಬಂದರೆ, ಅಂತಹ ರೋಗಿಗಳಿಗೆ ಈ ಕೊಠಡಿಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬೊಬ್ಬರನ್ನು ಒಂದೊಂದು ಕೊಠಡಿಗೆ ಕಾದಿರಿಸಿ ದಾಖಲಿಸಲಾಗುತ್ತಿದೆ. ಅವರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. 


 ಪರೀಕ್ಷೆ ನೆಗೆಟಿವ್ ಬಂದರೆ ಅವರಿಗೆ 14 ದಿನಗಳ ನಿಗಾವಣೆಯಲ್ಲಿರಲು ಸೂಚನೆ ನೀಡಿ ಮನೆಗೆ ಕಳುಹಿಸಲಾಗುತ್ತಿದೆ. ಪೊಸಿಟಿವ್ ಬಂದರೆ, ವಿಶ್ವ  ಆರೋಗ್ಯ ಸಂಸ್ಥೆಯ ಮಾರ್ಗದರ್ಶಿಯಂತೆ ಚಿಕಿತ್ಸೆ ಕೊಡಲಾಗುತ್ತದೆ. ಇದಕ್ಕಾಗಿ ಜಿಲ್ಲಾಧಿಕಾರಿಗಳ ಆದೇಶದಂತೆ, ವೆನ್ಲಾಕ್ ನಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾದ ಪ್ರತ್ಯೇಕ ಕೊಠಡಿಗಳಲ್ಲಿ ಈ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿ ರೋಗಿಗೂ ಎಲ್ಲ ರೀತಿಯ ಜೈವಿಕ ಮೆಡಿಕಲ್ ವ್ಯವಸ್ಥೆ ಕಲ್ಪಿಸಿ, ಇಲಾಖೆಯ ಮಾರ್ಗಸೂಚಿಗಳಂತೆ ತಜ್ಞವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.


 ವೆನ್ ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ 19 ಬಗ್ಗೆ ಜಾಗೃತಿ, ಮಾಹಿತಿ ನೀಡಲು ಹೆಲ್ಪ್ ಡೆಸ್ಕ್ ಅಲ್ಲಲ್ಲಿ ಸ್ಥಾಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com