ಕೊರೋನಾ ವಿರುದ್ಧ ಹೋರಾಡಲು ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆಯಿದೆ: ವಿಕ್ಟೋರಿಯಾ ಆಸ್ಪತ್ರೆ ವೈದ್ಯರು

ಕೊರೋನಾ ವೈರಸ್ ವಿರುದ್ಧ ಹೋರಾಡಲು ಸಿಬ್ಬಂದಿಗಳ ಕೊರತೆಯಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ವೈರಸ್ ವಿರುದ್ಧ ಹೋರಾಡಲು ಸಿಬ್ಬಂದಿಗಳ ಕೊರತೆಯಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. 

ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರ ಈಗಾಗಲೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1,700 ಬೆಡ್ ವ್ಯವಸ್ಥೆ ಮಾಡಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಎಲ್ಲಾ ವ್ಯವಸ್ಥೆಗಳನ್ನೂ ಮಾಡಿದೆ. ಆದರೆ, ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆಯಿದೆ ಎಂದು ಹೇಲಲಾಗುತ್ತಿದೆ. 

ಪ್ರಸ್ತುತ ಆಸ್ಪತ್ರೆಯಲ್ಲಿ ಮೂರು ತುರ್ತುನಿಗಾ ಘಟಕಗಳಿವೆ. 5 ಶ್ವಾಸಕೋಶಶಾಸ್ತ್ರಜ್ಞರು, 80-100 ಪ್ಯಾರಾಮೆಡಿಕಲ್ ಸಿಬ್ಬಂದಿಗಳಿದ್ದಾರೆ. ಆದರೆ, ರೋಗಿಗಳ ಸಂಖ್ಯೆ ಹೆಚ್ಚಾದಾಗ ಈ ಸಂಖ್ಯೆ ಸಾಕಾಗುವುದಿಲ್ಲ. ಕ್ಷಯ ರೋಗಿಗಳು, ಅಪಘಾತಗಳಿಂದ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಈಗಾಗಲೇ ಇವರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 

ಆಸ್ಪತ್ರೆಯಲ್ಲಿ 70-80 ವೆಂಟಿಲೇಟರ್ಸ್ ಗಳಿವೆ ಆದರೆ, ಅವುಗಳು ಸಾಕಾಗುವುದಿಲ್ಲ. ಬೆಂಗಳೂರು ವೈದ್ಯಕೀಯ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ದಾಖಲಾಗಿರುವ ಕೊರೋನಾ ವೈರಸ್ ಸೋಂಕಿತರಿಗೆ ಪಿಪಿಇ ನೀಡಲಾಗುತ್ತಿದೆ. ಈ ಪಿಪಿಇಗಳು ಇದೀಗ ಕೆಲಸ ಮಾಡಿದರೆ, ಎಲ್ಲಾ ಒಪಿಡಿ, ವೈದ್ಯಕೀಯ ಸರ್ಜಿಕಲ್ ಹಾಗೂ ಪ್ಯಾಥಲಜಿ ವೈದ್ಯರಿಗೆ ಹೆಚ್ಚಿನ ರಕ್ಷಣೆಯನ್ನು ನೀಡಬೇಕಾಗುತ್ತದೆ. ವೈರಸ್ ಪೀಡಿತ ರೋಗಿಗಲಿಗೆ ಹೇಗೆ ಚಿಕಿತ್ಸೆ ನೀಡಬೇಕು. ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕೆಂಬ ತರಬೇತಿಯನ್ನ ಈ ವರೆಗೂ ಯಾರಿಗೂ ನೀಡಿಲ್ಲ ಎಂದಿದ್ದಾರೆ. 

ಆಸ್ಪತ್ರೆಯಲ್ಲಿ ಮತ್ತಷ್ಟು ಸಿಬ್ಬಂದಿಗಳ ಅಗತ್ಯವಿದೆ. ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವ ಕುರಿತು ನಮಗೆ ತರಬೇತಿಯ ಆಗತ್ಯವಿದೆ. ಪ್ರಸ್ತುತ ಆಸ್ಪತ್ರೆಯಲ್ಲಿರುವ ಇತರೆ ರೋಗಿಗಳನ್ನು ಬಿಡುಗಡೆ ಮಾಡಿದ್ದೇ ಆದರೆ, ಕೊರೋನಾ ವೈರಸ್ ಪ್ರಕರಣಗಳ ನಿಭಾಯಿಸಲು ಪ್ರಸ್ತುತ ಆಸ್ಪತ್ರೆಯಲ್ಲಿರುವ ಸಿಬ್ಬಂದಿಗಳು ಸಾಕಾಗುತ್ತದೆ. ನಮ್ಮಿಂದ ಸಾಧ್ಯವಾದಷ್ಟು ಕೆಲಸವನ್ನು ನಾವು ಈಗಾಗಲೇ ಮಾಡುತ್ತಿದ್ದೇವೆ. ಒಂದು ವೇಳೆ ಸಿಬ್ಬಂದಿಗಳ ಅಗತ್ಯತೆ ಬಂದಿದ್ದೇ ಆದರೆ, ಖಾಸಗಿ ಕಂಪನಿಗಳ ಸಹಭಾಗಿತ್ವದೊಂದಿಗೆ ನಾವು ಕೆಲಸ ಮಾಡಬೇಕಾಗುತ್ತದೆ ಎಂದು ಸ್ಥಳೀಯ ವೈದ್ಯಕೀಯ ಅಧಿಕಾರಿ ಡಾ.ಶ್ರೀನಿವಾಸ್ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com