ಕೊರೋನಾ ಭೀತಿ: ವಿಮಾನ ನಿಲ್ದಾಣಗಳಲ್ಲಿ ಬ್ರೆತ್ ಅನಲೈಸರ್ ಬಳಕೆ ನಿಲ್ಲಿಸಿ- ಸರ್ಕಾರಕ್ಕೆ 'ಹೈ' ಸೂಚನೆ

ದೇಶವು ಕೋರೋನ ವೈರಸ್ ಸೋಂಕು ಮುಕ್ತವಾಗುವವರೆಗೂ ರಾಜ್ಯದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಉಸಿರಾಟ ತಪಾಸಣಾ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕೆಂಬ ಮನವಿಯನ್ನು ಪರಿಗಣಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ಸೋಮವಾರ ಸೂಚಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ದೇಶವು ಕೋರೋನ ವೈರಸ್ ಸೋಂಕು ಮುಕ್ತವಾಗುವವರೆಗೂ ರಾಜ್ಯದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಉಸಿರಾಟ ತಪಾಸಣಾ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕೆಂಬ ಮನವಿಯನ್ನು ಪರಿಗಣಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ಸೋಮವಾರ ಸೂಚಿಸಿದೆ. 

ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಉಸಿರಾಟ ತಪಾಸಣಾ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ಸೂಚನೆ ನೀಡಬೇಕೆಂದು ಕೋರಿ ಏರ್ ಟ್ರಾಫಿಕ್ ಕಂಟ್ರೋಲರ್ಸ್ ಗಿಲ್ಡ್ (ಇಂಡಿಯಾ) ಬೆಂಗಳೂರು ಶಾಲೆಯ ಕಾರ್ಯದರ್ಶಿ ಕೆ.ಟಿ.ಅನೂಪ್ ಹೈಕೋರ್ಟ್'ಗೆ ಸಾರ್ವಜನಿಕ ಅರ್ಜಿ ಸಲ್ಲಿಸಿದ್ದರು. 

ಸೋಮವಾರ ಆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಕೇಂದ್ರ ವಿಮಾನಯಾನ ಸಚಿವಾಲಯ, ಮೈಸೂರು, ಬೆಂಗಳೂರು, ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ನಿರ್ದೇಶಕರು, ವಿಮಾನ ನಿಲ್ದಾಣಗಳ ಪ್ರಾಧಿಕಾರ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com