ಕೋಲ್ಕತಾದಲ್ಲಿ ಪ್ರಯಾಣ ಹಿನ್ನೆಲೆ ಇಲ್ಲದ ವ್ಯಕ್ತಿಗೆ ಕೊರೋನಾ ಸೋಂಕು!

ಕೊರೋನಾ ವೈರಸ್ ದೇಶಾದ್ಯಂತ ತೀವ್ರವಾಗಿ ಹರಡುತ್ತಿದ್ದು, ಗುರುವಾರ ಪಶ್ಚಿಮ ಬಂಗಾಳದಲ್ಲಿ ಪ್ರಯಾಣ ಹಿನ್ನೆಲೆ ಇಲ್ಲದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿದ್ದು, ಮಹಾಮಾರಿ ಸಮುದಾಯಕ್ಕೆ ಹರಡಿರುವ ಸ್ಪಷ್ಟ ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಲ್ಕತಾ: ಕೊರೋನಾ ವೈರಸ್ ದೇಶಾದ್ಯಂತ ತೀವ್ರವಾಗಿ ಹರಡುತ್ತಿದ್ದು, ಗುರುವಾರ ಪಶ್ಚಿಮ ಬಂಗಾಳದಲ್ಲಿ ಪ್ರಯಾಣ ಹಿನ್ನೆಲೆ ಇಲ್ಲದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿದ್ದು, ಮಹಾಮಾರಿ ಸಮುದಾಯಕ್ಕೆ ಹರಡಿರುವ ಸ್ಪಷ್ಟ ಸೂಚನೆ ನೀಡಿದೆ.

ಇಂದು ಕರ್ನಾಟಕದ ಮೈಸೂರು ಜಿಲ್ಲೆಯಲ್ಲೂ ಒಬ್ಬ ವ್ಯಕ್ತಿಗೆ ಪ್ರಯಾಣ ಹಿನ್ನೆಲೆ ಇಲ್ಲದ ವ್ಯಕ್ತಿ ಸೋಂಕು ತಗುಲಿದ್ದು, ರಾಜ್ಯದಲ್ಲೂ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಕೋಲ್ಕತಾದ ನಯಬಾದ್ ನಲ್ಲಿ 66 ವರ್ಷದ ವ್ಯಕ್ತಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಈ ವ್ಯಕ್ತಿ ವಿದೇಶಕ್ಕೆ ಪ್ರಯಾಣ ಮಾಡಿಲ್ಲ ಮತ್ತು ವಿದೇಶದಿಂದ ಬಂದವರ ಸಂಪರ್ಕಕ್ಕೂ ಹೋಗಿಲ್ಲ. ಆದರೂ ಕೊರೋನಾ ಬಂದಿದ್ದು ಹೇಗೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಈ ವ್ಯಕ್ತಿ ಸದ್ಯ ಖಾಸಗಿ ಆಸ್ಪತ್ರೆಯ ಐಸೋಲೆಟೆಡ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಕುಟುಂಬದವರನ್ನು ಹೋಮ್ ಕ್ವಾರಂಟೈನ್ ನಲ್ಲಿಡಲಾಗಿದೆ. 

ಈ ವ್ಯಕ್ತಿ ಇತ್ತೀಚಿಗೆ ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು. ಅಲ್ಲಿ ಈ ಬಂದಿದ್ದ ಸೋಂಕಿತ ವ್ಯಕ್ತಿಯಿಂದ ಇವರಿಗೆ ಕೊರೋನಾ ಬಂದಿರಬಹುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com