ಕೊರೊನಾ ವಿರುದ್ಧ ಸಮರ: 3 ತಿಂಗಳ ವೇತನ ದೇಣಿಗೆ ಕೊಟ್ಟ ಶಾಸಕ ಯತ್ನಾಳ್, ತಿಂಗಳ ವೇತನ ನೀಡಿದ ಸಂಸದ ಜೋಶಿ

 ಮಾಜಿ ಕೇಂದ್ರ ಸಚಿವ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊರೋನಾ ವಿರುದ್ಧ ಹೋರಾಟಕ್ಕೆ ಸಹಾಯಹಸ್ತ ಚಾಚಿದ್ದು ತಮ್ಮ ಮೂರು ತಿಂಗಳ ವೇಟನವನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನೀಡಿದ್ದಾರೆ.
ಪ್ರಹಾದ್ ಜೊಶಿ  ಬಸನಗೌಡ ಪಾಟೀಲ್ ಯತ್ನಾಳ್
ಪ್ರಹಾದ್ ಜೊಶಿ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಮಾಜಿ ಕೇಂದ್ರ ಸಚಿವ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊರೋನಾ ವಿರುದ್ಧ ಹೋರಾಟಕ್ಕೆ ಸಹಾಯಹಸ್ತ ಚಾಚಿದ್ದು ತಮ್ಮ ಮೂರು ತಿಂಗಳ ವೇಟನವನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನೀಡಿದ್ದಾರೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಯತ್ನಾಳ್ ಕೊರೋನಾ ಕಾರಣ ಆರ್ಥಿಕ ಸಂಸ್ಕಷ್ಟ ಎದುರಾಗಿದೆ. ಈ ಸಮಯದಲ್ಲಿ ನಾವು ಸರ್ಕಾರಕ್ಕೆ ನೈತಿಕವಾಗಿಯೂ, ಆರ್ಥಿಕವಾಗಿಯೂ ನೆರವಾಗಬೇಕಿದೆ. ಹೀಗಾಗಿ ಮೂರು ತಿಂಗಳ ವೇತನವನ್ನು ನೀಡುತ್ತಿದ್ದೇನೆ ಎಂದಿದ್ದಾರೆ.

ಇದೇ ವೇಳೆ ಕೇಂದ್ರ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ  ಸಚಿವರಾದ ಪ್ರಹಾದ್ ಜೊಶಿ ಸಹ ತಮ್ಮ ಒಂದು ತಿಂಗಳ ವೇತನವನ್ನು ಕೊರೋನಾ ವಿರುದ್ಧ ಹೋರಾಟಕ್ಕಾಗಿ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಗೆ ನೀಡಿದ್ದಾರೆ. 

ದೇಶವ್ಯಾಪಿ ಕೊರೋನಾ ಮಹಾಮಾರಿ ಹಬ್ಬುತ್ತಿದ್ದು ಇದರ ವಿರುದ್ಧ ಹೋರಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಟೊಂಕ ಕಟ್ಟಿ ಸಿದ್ದವಾಗಿದೆ. ಈ ನಡುವೆ ಕೇಂದ್ರ ಸರ್ಕಾರ ದೇಶದ ನಾಗರಿಕರಿಗೆ ವಿಶೇಷ ಪ್ಯಾಕೇಜ್ ಗಳ ಘೋಷಣೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com