ವೈದ್ಯರು, ನರ್ಸ್'ಗಳ ಮನೆ ಖಾಲಿ ಮಾಡಿಸುವವರ ವಿರುದ್ಧ ಕಾನೂನು ಕ್ರಮ: ರಾಜ್ಯ ಸರ್ಕಾರ

ಕೊರೋನಾ ಸೋಂಕಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಶುಶ್ರುಷಕರು, ವೈದ್ಯಕೀಯ ಸಿಬ್ಬಂದಿಯನ್ನು ಮನೆ ಖಾಲಿ ಮಾಡುವಂತೆ ಒತ್ತಾಯಿಸುತ್ತಿರುವ ಮನೆ ಮಾಲಿಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. 
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೋನಾ ಸೋಂಕಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಶುಶ್ರುಷಕರು, ವೈದ್ಯಕೀಯ ಸಿಬ್ಬಂದಿಯನ್ನು ಮನೆ ಖಾಲಿ ಮಾಡುವಂತೆ ಒತ್ತಾಯಿಸುತ್ತಿರುವ ಮನೆ ಮಾಲಿಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. 

ಕೊರೋನಾ ವೈರಾಣು ವಿರುದ್ಧ ಜೀವ ಪಣಕ್ಕಿಟ್ಟು ಹೋರಾಡುವ ಮೂಲಕ ಜನರ ಜೀವ ರಕ್ಷಿಸುತ್ತಿರುವ ವೈದ್ಯರು, ಶುಶ್ರೂಷಕರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಕೆಲವು ಮನೆ ಮಾಲೀಕರು ಕೊರೋನಾ ಬಯದಿಂದ ಮನೆ ಖಾಲಿ ಮಾಡುವಂತೆ ಕಿರುಕುಳ ನೀಡುತ್ತಿರುವುದು ವರದಿಯಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆಗೆ ಹಲವು ದೂರುಗಳು ಬಂದಿವೆ. 

ಈ ಹಿನ್ನೆಲೆಯಲ್ಲಿ ಅಂತಹ ಮನೆ ಮಾಲಿಕರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರು ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸೂಚನೆ ನೀಡಿದ್ದಾರೆ. 

ನೀವು ಸೋಂಕಿತರೊಂದಿಗೆ ಇದ್ದು, ಬರುತ್ತೀರಿ. ನಿಮ್ಮಿಂದ ನಮಗೂ, ಬೇರೆಯವರಿಗೂ ಸೋಂಕು ತಗುಲಬಹುದು ಎಂದು ಮನೆ ಮಾಲೀಕರು ತಕರಾರು ತೆಗೆಯುತ್ತಿದ್ದಾರೆ. ತಾವು ತೆಗೆದುಕೊಂಡ ಸುರಕ್ಷತಾ ಕ್ರಮಗಳ ಬಗ್ಗೆ ಎಷ್ಟೇ ಮಾಹಿತಿ ನೀಡಿದರೂ ಮನೆ ಮಾಲೀಕರು ಒಪ್ಪುತ್ತಿಲ್ಲ. ಹೀಗಾಗಿ ಇಂತಹ ವಸತಿ ಮಾಲೀಕರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ಕಾಯಿಲೆ ಕಾಯ್ದೆ-2020 ಅಡಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅಖ್ತರ್ ಆದೇಶದಲ್ಲಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com