ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ: ಮೈಕ್ರೋ ಫೈನಾನ್ಸ್, ಸ್ವಸಹಾಯ ಸಂಘಗಳ ಸಾಲ ಮರುಪಾವತಿಗೆ ಕಾಲಾವಕಾಶ ವಿಸ್ತರಣೆ

ಕೊರೊನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದ್ಯಂತ ಲಾಕ್‍ಡೌನ್ ಆಗಿರುವ ಹಿನ್ನಲೆಯಲ್ಲಿ ಜಿಲ್ಲೆಯ ರೈತರಿಗೆ ಹಾಗೂ ಕೂಲಿಕಾಮೀಕರು, ಸಣ್ಣ ಉದ್ದಿಮೆದಾರರು, ಸಾರ್ವಜನಿಕರಿಗೆ ಅನಗತ್ಯ ಕಿರುಕುಳ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅವರು ರಾಜ್ಯದಲ್ಲೆ ಮೊದಲು ಎನ್ನಬಹುದಾದ ಎರಡು ಮಹತ್ವದ ಆದೇಶಗಳನ್ನು ಹೊರಡಿಸಿ ಅನುಕೂಲ ಕಲ್ಪಿಸಿಕೊಟ್ಟ
ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ
ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ

ಚಾಮರಾಜನಗರ: ಕೊರೊನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದ್ಯಂತ ಲಾಕ್‍ಡೌನ್ ಆಗಿರುವ ಹಿನ್ನಲೆಯಲ್ಲಿ ಜಿಲ್ಲೆಯ ರೈತರಿಗೆ ಹಾಗೂ ಕೂಲಿಕಾಮೀಕರು, ಸಣ್ಣ ಉದ್ದಿಮೆದಾರರು, ಸಾರ್ವಜನಿಕರಿಗೆ ಅನಗತ್ಯ ಕಿರುಕುಳ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ.  ಎಂ.ಆರ್.ರವಿ ಅವರು ರಾಜ್ಯದಲ್ಲೆ ಮೊದಲು ಎನ್ನಬಹುದಾದ ಎರಡು ಮಹತ್ವದ ಆದೇಶಗಳನ್ನು ಹೊರಡಿಸಿ ಅನುಕೂಲ ಕಲ್ಪಿಸಿಕೊಟ್ಟಿದ್ದಾರೆ.

ಜಿಲ್ಲೆಯಲ್ಲಿ ರಸಗೊಬ್ಬರ, ಬಿತ್ತನೆ ಬೀಜ, ಮತ್ತು ಕೀಟ ನಾಶಕಗಳನ್ನು ಮಾರಾಟ ಮಾಡುವ ರಸಗೊಬ್ಬರ ಮಳಿಗೆಗಳು ನಿಗದಿತ ಅವಧಿಯಲ್ಲಿ ತೆರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಅಲ್ಲದೆ, ಕೂಲಿ ಕಾರ್ಮಿಕರು, ಸಣ್ಣ ಉದ್ದಿಮೆದಾರರು, ಸ್ವಸಹಾಯ ಸಂಘಗಳು, ಮೈಕ್ರೋ ಫೈನಾನ್ಸ್,  ಇನ್ನಿತರ ಸಂಘಗಳಿಂದ ಪಡೆದಿರುವ ಸಾಲವನ್ನು ಮರುಪಾವತಿಸುವ ಅವಧಿಯನ್ನು 2 ತಿಂಗಳ ಅವಧಿ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅವರು ಅದೇಶಿಸಿದ್ದಾರೆ. 

ಜಿಲ್ಲೆಯಲ್ಲಿ ಅಧಿಕೃತ ಪರವಾನಗಿ ಪಡೆದ ಕೃಷಿ ಪರಿಕರ ಮಾರಾಟಗಾರರು ರಸಗೊಬ್ಬರ, ಬಿತ್ತನೆ ಬೀಜ,  ಕೀಟನಾಶಕಗಳನ್ನು ಮಾರಾಟ ಮಾಡಲು ರಸಗೊಬ್ಬರದ ಮಳಿಗೆಗಳನ್ನು ಮಾರ್ಚ್ 26ರಿಂದ ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ತೆರೆಯಲು ಕೆಲ ಷರತ್ತುಗಳೊಂದಿಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಂಗಾಮು ಪ್ರಾರಂಭವಾಗುತ್ತಿದ್ದು, ರಸಗೊಬ್ಬರ ಅವಶ್ಯಕ ವಸ್ತುಗಳ ಕಾಯ್ದೆಯಡಿ ಬರುವುದರಿಂದ ರೈತರ ಹಿತದೃಷ್ಟಿಯಿಂದ ಅಧಿಕೃತ ಪರವಾನಗಿ ಪಡೆದ ಕೃಷಿ ಪರಿಕರಗಳ ಮಾರಾಟಗಾರರು ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕೀಟನಾಶಕಗಳ  ಮಾರಾಟವನ್ನು ಸೂಚಿಸಿರುವ ನಿಗದಿತ ಅವಧಿಯಲ್ಲಿಯೇ ಮಾರಾಟ ಮಾಡಬೇಕು. 

ಮಾರಾಟ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಸ್ಕ್ಯಾನರ್‍ಗಳನ್ನು ಬಳಸದೆ OTP ಮೂಲಕ ಖರೀದಿ ಮಾಡಬೇಕು. ಮಾರಾಟ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಲಿಕ್ವಿಡ್‍ನ್ನು ಕಡ್ಡಾಯವಾಗಿ ಬಳಸಬೇಕು. ಮಾರಾಟ ಕೇಂದ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸುವುದರಿಂದ ಒಬ್ಬೊಬ್ಬರೆ ನಿಲ್ಲಬೇಕು  ಹಾಗೂ ಒಬ್ಬರಿಂದ ಮತ್ತೊಬ್ಬರ ಮಧ್ಯೆ 1 ಮೀಟರ್‍ಗೆ ಗೆರೆ ಎಳೆದು ಅಂತರವನ್ನು ಕಾಯ್ದುಕೊಳ್ಳಬೇಕು. ಮಾರಾಟ ಕೇಂದ್ರದಲ್ಲಿ ಒಂದು ಬಾರಿಗೆ ಒಬ್ಬ ರೈತರಿಗೆ ಕೃಷಿ ಪರಿಕರ ನೀಡÀಬೇಕು. ಪರಿಕರಗಳನ್ನು ಪಡೆದ ರೈತರು ಮಾರಾಟ ಕೇಂದ್ರದಿಂದ ತಕ್ಷಣವೇ ತೆರಳಬೇಕೆಂದು ಜಿಲ್ಲಾಧಿಕಾರಿ  ಹೊರಡಿಸಿರುವ ಆದೇಶದಲ್ಲಿ ಷರತ್ತುಗಳನ್ನು ವಿಧಿಸಿದ್ದಾರೆ.

ಕೊರೊನಾ ವೈರಸ್ ತಡೆಯುವ ಮುಂಜಾಗ್ರತಾ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಯಾಗಿರುವುದರಿಂದ ಕೂಲಿ ಕಾರ್ಮಿಕರು, ಸಣ್ಣ ಉದ್ದಿಮೆದಾರರು, ಸಾರ್ವಜನಿಕರಿಗೆ ಸಾಲ ಮರುಪಾವತಿಸುವಂತೆ ಒತ್ತಡ ಹೇರಿ ಅನಗತ್ಯವಾಗಿ ಕಿರುಕುಳ ನೀಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ.  ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲೆಯಲ್ಲಿರುವ ಸ್ವಸಹಾಯ ಸಂಘಗಳು, ಧರ್ಮಸ್ಥಳ ಮಹಿಳಾ ಸ್ವಸಹಾಯ ಸಂಘಗಳು, ಮೈಕ್ರೋ ಫೈನಾನ್ಸ್ ಇನ್ನಿತರ ಸಂಘ ಸಂಸ್ಥೆಗಳಿಂದ ಪಡೆದಿರುವ ಸಾಲವನ್ನು ಮರುಪಾವತಿಸಲು ನಿಗದಿಪಡಿಸಿರುವ ಕಾಲಾವಧಿಯನ್ನು 2 ತಿಂಗಳವರೆಗೆ  ವಿಸ್ತರಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com