ಚಿಕ್ಕಬಳ್ಳಾಪುರದಲ್ಲಿ ಹೊಸದಾಗಿ 5 ಪ್ರಕರಣ ಪತ್ತೆ, ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 69ಕ್ಕೇರಿಕೆ, ಆತಂಕ ಸೃಷ್ಟಿ!

ಚಿಕ್ಕಬಳ್ಳಾಪುರದಲ್ಲಿ ಮತ್ತೆ ಹೊಸದಾಗಿ 5 ಪ್ರಕರಣ ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆಯಾಗಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಮತ್ತೆ ಹೊಸದಾಗಿ 5 ಪ್ರಕರಣ ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆಯಾಗಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. 

ಚಿಕ್ಕಬಳ್ಳಾಪುರದ ಗೌರಿಬಿದನೂರು ನಗರದಲ್ಲಿ ಹೊಸದಾಗಿ ಪ್ರಕರಣಗಳು ಪತ್ತೆಯಾಗಿದೆ. 7 ಶಂಕಿತರ ಪೈಕಿ 5 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಇನ್ನು ಇಬ್ಬರ ಅಂತಿಮ ವರದಿ ಬರಬೇಕಾಗಿದೆ ಎಂದು ಚಿಕ್ಕಬಳ್ಳಾಪುರ ಡಿಸಿ ಆರ್ ಲತಾ ಮಾಹಿತಿ ನೀಡಿದ್ದಾರೆ. 

ಲಾಕ್ ಡೌನ್ ಇದ್ದರೂ ಇಂದು ಒಂದೇ ದಿನ ರಾಜ್ಯದಲ್ಲಿ  ಹೊಸದಾಗಿ 14 ಪ್ರಕರಣಗಳು ಪತ್ತೆಯಾಗಿವೆ. ಇದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. 

ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 7 ಕೊರೋನಾ ಸೋಂಕಿತ ಪ್ರಕರಣಗಳು ವರದಿಯಾಗಿತ್ತು. ಇದರ ಜೊತೆಗೆ ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಇಂದು ಒಂದೇ ದಿನ 34 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದರಿಂದ ಜಿಲ್ಲಾಡಳಿತ ನಾಳೆಯಿಂದ ವೈದ್ಯಕೀಯ ಸೇವೆ ಹೊರತುಪಡಿಸಿ ಅಗತ್ಯ ವಸ್ತುಗಳು, ಪೆಟ್ರೋಲ್ ಬಂಕ್ ಸೇರಿದಂತೆ ಎಲ್ಲವನ್ನೂ ಬಂದ್ ಮಾಡಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ. 

ಕೊರೋನಾಗೆ ರಾಜ್ಯದಲ್ಲಿ ಮತ್ತೊಂದು ಬಲಿ
ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ಸೋಂಕಿನಿಂದ ಮೃತಪಟ್ಟಿರುವ 60 ವರ್ಷದ ಧರ್ಮ ಪ್ರಚಾರಕರೋರ್ವರು ಮಾರ್ಚ್ 13ರಂದು ರೈಲಿನಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಇವರು ತುಮಕೂರಿನ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

24 ಜನರು ಇವರೊಂದಿಗೆ ನೇರ ಸಂಪರ್ಕ ಹೊಂದಿದ್ದು, 13 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ 8 ಜನರಲ್ಲಿ ಸೋಂಕು ಪತ್ತೆಯಾಗಿಲ್ಲ. ಉಳಿದ ಮೂವರು ಆರೋಗ್ಯ ಸಿಬ್ಬಂದಿಯಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com