ಕೊರೋನಾ ಭೀತಿ: 8 ಲಕ್ಷ ಲೀ.ಹಾಲು ಮಾರಾಟವಾಗುತ್ತಿಲ್ಲ-ಬಾಲಚಂದ್ರ ಜಾರಕಿಹೊಳಿ

ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹೇರಲಾಗಿರುವ ಲಾಕ್ ಡೌನ್ ನಿಂದಾಗಿ ನಂದಿನಿ ಹಾಲು ಹಾಗೂ ಮೊಸರಿಗೆ ಬೇಡಿಕೆ ಕುಸಿದಿದ್ದು, ಪ್ರತಿನಿತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ
ಬಾಲಚಂದ್ರ ಜಾರಕಿಹೊಳಿ
ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹೇರಲಾಗಿರುವ ಲಾಕ್ ಡೌನ್ ನಿಂದಾಗಿ ನಂದಿನಿ ಹಾಲು ಹಾಗೂ ಮೊಸರಿಗೆ ಬೇಡಿಕೆ ಕುಸಿದಿದ್ದು, ಪ್ರತಿನಿತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ

ನಗರದಲ್ಲಿ ಶನಿವಾರ ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೊರೋನಾ ವೈರಸ್ ಹರಡುವುದನ್ನು ತಡೆಯಲು ಕೆಎಂಎಫ್ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹಾಲು ಉತ್ಪಾದಕರ ಸಂಘಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ೧೦ ಲಕ್ಷ ಲೀಟರ್ ಮಾರಾಟವಾಗದೇ ಉಳಿಯುವ ಸಾಧ್ಯತೆಯಿದೆ. ಆದರೂ ರೈತರಿಂದ ಹಾಲು ಖರೀದಿಯನ್ನು ನಿಲ್ಲಿಸಿಲ್ಲ. ಹಾಲು ರಜೆ ಘೋಷಿಸಿಲ್ಲ ಎಂದರು. 

ಕೆಎಂಎಫ್ ತನ್ನ ೧೪ ಜಿಲ್ಲಾ ಹಾಲು ಒಕ್ಕೂಟಗಳ ಮೂಲಕ ನಿತ್ಯ ೯ ಲಕ್ಷ ಹೈನುಗಾರರಿಂದ ೬೮ ಲಕ್ಷ ಲೀಟರ್ ಹಾಲು ಸಂಗ್ರಹಿಸುತ್ತಿದೆ. ಈ ಹಾಲಿನ ಸಂಗ್ರಹ ೭೦ ಲಕ್ಷ ಲೀಟರ್ ಗೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಸಂಗ್ರಹವಾಗುವ ೭೦ ಲಕ್ಷ ಲೀಟರ್ ಹಾಲಿನ ಪೈಕಿ ೪೦ ಲಕ್ಷ ಲೀಟರ್ ಹಾಲು ಹಾಲು, ಮೊಸರು, ಟೆಟ್ರಾ, ಫೆಕ್ಸಿ ಮೂಲಕ ಮಾರಾಟವಾಗುತ್ತಿದೆ. ೧೫ ಲಕ್ಷ ಲೀಟರ್ ಹಾಲನ್ನು ಪೌಡರ್ ಮಾಡಲಾಗುತ್ತಿದೆ. ಇದರ ಜೊತೆಗೆ ಹೊರಗಿನ ಪೌಡರ್ ಪ್ಲಾಂಟ್ ಗಳನ್ನು ಸಂಪರ್ಕಿಸಿ ೭ ಲಕ್ಷ ಲೀಟರ್ ಹಾಲನ್ನು ಫೌಡರ್ ಮಾಡಲಾಗುತ್ತಿದೆ ಎಂದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com