ಜನಸಾಮಾನ್ಯರಿಗೆ ಅಗತ್ಯವಸ್ತುಗಳಿಗೆ ತೊಂದರೆಯಾಗದು-ಯಡಿಯೂರಪ್ಪ ವಿಡಿಯೋ ಸಂದೇಶ

ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದಾಗಿ ಘೋಷಿಸಲಾಗಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದಾಗಿ ಘೋಷಿಸಲಾಗಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ಈ ಕುರಿತು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ಜನ ಸಾಮಾನ್ಯರಿಗೆ ಅಗತ್ಯವಾಗಿರುವ ಹಣ್ಣು ತರಕಾರಿ, ದಿನಸಿ ಪದಾರ್ಥಗಳು, ರೈತರಿಗೆ ಗೊಬ್ಬರ, ಬಿತ್ತನೆ ಬೀಜ, ಕೀಟ ನಾಶಕಗಳು ಲಭ್ಯವಾಗುವಂತೆ ಸೂಚಿಸಲಾಗಿದೆ. 

ಜನರು ತಮ್ಮ ಮನೆಯ ಆಸುಪಾಸಿನಲ್ಲೇ ಅಗತ್ಯ ವಸ್ತುಗಳನ್ನು ಖರೀದಿಸುವಂತೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.  ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ

ವೈದ್ಯರು, ದಾದಿಯರು, ಅರೆವೈದ್ಯಕೀಯ ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರ ಬಾಡಿಗೆ ಮನೆ ಮಾಲೀಕರಿಂದ ಯಾವುದೇ ರೀತಿಯ ತೊಂದರೆಯಾಗದಂತೆ  ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com