ಕೊರೋನಾ ಕುರಿತ ಸರ್ವ ಪಕ್ಷಗಳ ಸಭೆ - ತೆಗೆದುಕೊಂಡ ನಿರ್ಣಯಗಳು

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು. ಸಭೆಯಲ್ಲಿ ಸಚಿವ ಸಂಪುಟದ ಸದಸ್ಯರು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಹೆಚ್. ಡಿ. ಕುಮಾರಸ್ವಾಮಿ, ಎಸ್. ಆರ್. ಪಾಟೀಲ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.
ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆ
ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆ

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು. ಸಭೆಯಲ್ಲಿ ಸಚಿವ ಸಂಪುಟದ ಸದಸ್ಯರು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಹೆಚ್. ಡಿ. ಕುಮಾರಸ್ವಾಮಿ, ಎಸ್. ಆರ್. ಪಾಟೀಲ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಅದರಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

1.ಸರ್ವ ಪಕ್ಷಗಳ ಸಭೆಯಲ್ಲಿ ನಾಯಕರು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ. ಸರ್ಕಾರ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಲಿದೆ.

2.ಸರ್ವ ಪಕ್ಷದ ಮುಖಂಡರು ಸರ್ಕಾರದ ಕ್ರಮಗಳಿಗೆ ಒಕ್ಕೊರಲಿನ ಬೆಂಬಲ ವ್ಯಕ್ತಪಡಿಸಿ, ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಜೋಡಿಸುವುದಾಗಿ ಸಹಮತ ವ್ಯಕ್ತಪಡಿಸಿದರು.

3.ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್‍ಗಳು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.

4.ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.

5.ರಾಜ್ಯದ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು.

6.ಸೋಂಕಿಗೊಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು.

7.ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು.

8.ರೈತರ ಕೃಷಿ ಉತ್ಪನ್ನಗಳ, ಸಾಗಣೆ, ಮಾರಾಟ ಮತ್ತು ಒಳಕೆದಾರರಿಗೆ ಸೂಕ್ತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು.

9.ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆ ಸೂಕ್ತ ವ್ಯವಸ್ಥೆ ಮಾಡಲಾಗುವುದು.

10.ಪಡಿತರವನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.

11.ಮುಸ್ಲಿಂ ಬಾಂಧವರ ಜೊತೆ ನಾನು ಸಭೆ ನಡೆಸಿದ್ದು, ಅವರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ನಡೆಸಲು ಒಪ್ಪಿ ಸಹಕರಿಸಿರುತ್ತಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಸಿಎಂ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com