ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ದಿನಸಿ ಪೂರೈಕೆ ಇಲ್ಲ, ಹಾಲು, ಇಂಧನ, ಗ್ಯಾಸ್, ಪತ್ರಿಕೆಗೆ ಸಮಸ್ಯೆಯಿಲ್ಲ!

ದಿನಸಿ, ಹಾಲು ಮತ್ತು ಇತರ ಅಗತ್ಯ ವಸ್ತುಗಳ ಕೊಡು-ಕೊಳ್ಳುವಿಕೆಗೆ ವಿನಾಯ್ತಿ ನೀಡಲಾಗಿದ್ದರೂ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ದಿನಸಿ ಮತ್ತು ಹಾಲುಗಳ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು. ಅದಕ್ಕೆ ಕಾರಣ ನೆರೆಯ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವುದು.
ಮಂಗಳೂರಿನ ರಸ್ತೆಯೊಂದರಲ್ಲಿ ನೀರವ ಮೌನ
ಮಂಗಳೂರಿನ ರಸ್ತೆಯೊಂದರಲ್ಲಿ ನೀರವ ಮೌನ

ಮಂಗಳೂರು:ದಿನಸಿ, ಹಾಲು ಮತ್ತು ಇತರ ಅಗತ್ಯ ವಸ್ತುಗಳ ಕೊಡು-ಕೊಳ್ಳುವಿಕೆಗೆ ವಿನಾಯ್ತಿ ನೀಡಲಾಗಿದ್ದರೂ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ದಿನಸಿ ಮತ್ತು ಹಾಲುಗಳ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು. ಅದಕ್ಕೆ ಕಾರಣ ನೆರೆಯ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವುದು.

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಲನ್ನು ಪೂರೈಸಲಾಗುತ್ತಿದೆ. ಆದರೆ ದಿನಸಿಗಳನ್ನು ಪೂರೈಸಲಾಗುತ್ತಿಲ್ಲ. ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಉನ್ನತ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂದು ಜಿಲ್ಲೆಯಲ್ಲಿ ಹಾಲಿನ ಪೂರೈಕೆಗೆ ಕೊರತೆಯಾಗುವುದಿಲ್ಲ. ವೈದ್ಯಕೀಯ ಮಳಿಗೆಗಳು, ದಿನಪತ್ರಿಕೆಗಳ ಪೂರೈಕೆ, ಗ್ಯಾಸ್ ಮತ್ತು ಇಂಧನಗಳ ಪೂರೈಕೆಗೆ ಲಾಕ್ ಡೌನ್ ನಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದರು.

ಇನ್ನು ಜಿಲ್ಲೆಯಲ್ಲಿ ಮನೆಮನೆಗಳಿಗೆ ದಿನಸಿ ಮತ್ತು ಅಗತ್ಯ ವಸ್ತುಗಳ ಪೂರೈಕೆ ಸಂಬಂಧ 300ಕ್ಕೂ ಹೆಚ್ಚು ವ್ಯಾಪಾರಸ್ಥರ ಜೊತೆ ಸಭೆ ನಡೆಸಿ ನಿರ್ಧಾರಕ್ಕೆ ಬರಲಾಗುವುದು.ಜಿಲ್ಲೆಗೆ ಬರುವ ಮತ್ತು ಜಿಲ್ಲೆಯಿಂದ ಹೊರಹೋಗುವ ಟ್ರಕ್ ಗಳನ್ನು ತಡೆಯುವುದು ಬೇಡ, ಹಾಗೆಂದು ನೆರೆ ರಾಜ್ಯಗಳಿಂದ ಬರುವ ಆಂಬ್ಯುಲೆನ್ಸ್ ಗೆ ಜಿಲ್ಲೆಯ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com