ಮೃತ ವೃದ್ಧನ 13 ವರ್ಷದ ಮಗನಲ್ಲಿ ಸೋಂಕು ದೃಢ: ಜಿಲ್ಲಾಧಿಕಾರಿ ರಾಕೇಶ್ ಕುಮಾರ್

ಇತ್ತೀಚೆಗಷ್ಟೇ ಕೊರೋನಾ ವೈರಸ್ ಸೋಂಕು ತಗುಲಿ ಮೃತಪಟ್ಟಿದ್ದ ಶಿರಾ ಪಟ್ಟಣದ ವೃದ್ಧನ 13 ವರ್ಷದ ಮಗನಲ್ಲಿ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತುಮಕೂರು: ಇತ್ತೀಚೆಗಷ್ಟೇ ಕೊರೋನಾ ವೈರಸ್ ಸೋಂಕು ತಗುಲಿ ಮೃತಪಟ್ಟಿದ್ದ ಶಿರಾ ಪಟ್ಟಣದ ವೃದ್ಧನ 13 ವರ್ಷದ ಮಗನಲ್ಲಿ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು,‌ ತುಮಕೂರು ಜಿಲ್ಲೆಯಲ್ಲಿ ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ಎರಡನೇ ಪ್ರಕರಣ ಖಚಿತಗೊಂಡಿದೆ. ಇತ್ತೀಚೆಗೆ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದ ಶಿರಾದ 60 ವರ್ಷದ ವಯಸ್ಸಿನ 13 ವರ್ಷದ ವಯಸ್ಸಿನ ಮಗನಿಗೆ ಸೋಂಕು ತಗುಲಿದ್ದು, ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಬಾಲಕನನ್ನು ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತ ವೃದ್ಧನೊಂದಿಗೆ ಸಂಪರ್ಕದಲ್ಲಿದ್ದವರಲ್ಲಿ ವೈದ್ಯಕೀಯ ಪರೀಕ್ಷೆಯಲ್ಲಿ ನೆಗೆಟಿವ್ ಎಂದು ಕಂಡುಬಂದಿದೆ ಎಂದರು.

ಮಾ.17ರಂದು ಮೃತ ವೃದ್ಧ ತಿಪಟೂರಿಗೆ ಹೋಗಿದ್ದರು. ಆದ್ದರಿಂದ ತಿಪಟೂರಿನಲ್ಲಿ ಒಟ್ಟು 11 ಜನರ ರಕ್ತ ಮತ್ತು ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 30 ಸ್ಯಾಂಪಲ್ ಗಳ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಇಬ್ಬರು ಕೋವಿಡ್-19 ಸೋಂಕಿತರೆಂದು ಗುರುತಿಸಲಾಗಿದೆ. ಇದೀಗ 13 ವರ್ಷದ ಬಾಲಕನನ್ನು ರೋಗಿ ನಂ.84ಎಂದು ಪರಿಗಣಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈಗಾಗಲೇ ಶಿರಾ ಪಟ್ಟಣವನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಲಾಗಿದ್ದು, 100 ಕ್ಕೂ ಹೆಚ್ಚು ತಂಡಗಳು ಶಿರಾದಲ್ಲಿ ಮನೆ ಮನೆಗೆ ತೆರಳಿ ಎಲ್ಲರ ಆರೋಗ್ಯ ಪರಿಶೀಲನೆ ಮಾಡುತ್ತಿದ್ದಾರೆ ಎಂದರು.

ಇನ್ನು, ದಿನನಿತ್ಯ ವಸ್ತುಗಳಿಗೆ ತೊಂದರೆಯಾಗದಂತೆ ಮನೆ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com