ಲಾಕ್ ಡೌನ್ ಉಲ್ಲಂಘಿಸಿದರೇ ನಿಮ್ಮ ವಾಹನ  ಸೀಜ್: ರಾಜ್ಯ ಸರ್ಕಾರದ ಮಹತ್ವದ ಆದೇಶ

ದೇಶಾದ್ಯಂತ ಕೊರೋನಾ ವೈರಸ್​ ನಿರಂತರವಾಗಿ ಹರಡುತ್ತಲೇ ಇದೆ. ಹೀಗಾಗಿ ಕೇಂದ್ರ ಸರ್ಕಾರ 21 ದಿನಗಳ ಲಾಕ್​ಡೌನ್​ ಆದೇಶ ಹೊರಡಿಸಿದೆ. ಆದಾಗ್ಯೂ ಅನೇಕರು ರಸ್ತೆಯ ಮೇಲೆ ಅನಗತ್ಯವಾಗಿ ಸುತ್ತಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಎಷ್ಟೇ ಸೂಚನೆ ನೀಡಿದರು ಜನರು ಮಾತ್ರ ಬದಲಾಗುತ್ತಿಲ್ಲ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ದೇಶಾದ್ಯಂತ ಕೊರೋನಾ ವೈರಸ್​ ನಿರಂತರವಾಗಿ ಹರಡುತ್ತಲೇ ಇದೆ. ಹೀಗಾಗಿ ಕೇಂದ್ರ ಸರ್ಕಾರ 21 ದಿನಗಳ ಲಾಕ್​ಡೌನ್​ ಆದೇಶ ಹೊರಡಿಸಿದೆ. ಆದಾಗ್ಯೂ ಅನೇಕರು ರಸ್ತೆಯ ಮೇಲೆ ಅನಗತ್ಯವಾಗಿ ಸುತ್ತಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಎಷ್ಟೇ ಸೂಚನೆ ನೀಡಿದರು ಜನರು ಮಾತ್ರ ಬದಲಾಗುತ್ತಿಲ್ಲ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ಹೀಗಾಗಿ, ಲಾಕ್​ಡೌನ್ ವೇಳೆ ಕಾರಣ ಇಲ್ಲದೆ ಓಡಾಡಿದರೆ ಅಂಥ ವಾಹನವನ್ನು ಲಾಕ್​ಮಾಡಲು ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ. ಈ ಮೂಲಕ ಕಠಿಣ ಆದೇಶವನ್ನು ಹೊರಡಿಸಿದೆ. ನಿನ್ನೆಯಿಂದಲೇ ಈ ನಿಯಮ ಜಾರಿಗೆ ಬಂದಿದೆ. ಅಚ್ಚರಿ ಎಂದರೆ ನಿನ್ನೆ ಒಂದೇ ದಿನ 900 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಕಟ್ಟುನಿಟ್ಟಾಗಿ ಲಾಕ್ ಡೌನ್ ಜಾರಿಗೆ ತಂದರೂ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲೇ ಇದೆ. ದೇಶಾದ್ಯಂತ ಕೊರೋನಾ ವೈರಸ್ ಸೋಂಕು ತಗುಲಿದವರ ಸಂಖ್ಯೆ 1,024ಕ್ಕೆ ಮುಟ್ಟಿದೆ ಎಂದು ಇತ್ತೀಚಿನ ವರದಿಗಳು ಹೇಳುತ್ತಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com