ರಾಜ್ಯದಲ್ಲಿ 100 ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ, ಕಲಬುರಗಿಯಲ್ಲಿ ಮತ್ತೊಂದು ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದ್ದು, ಮಂಗಳವಾರ ಮತ್ತೆ ಏಳು ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದ್ದು, ಮಂಗಳವಾರ ಮತ್ತೆ ಏಳು ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಬೆಂಗಳೂರಿನ 40 ವರ್ಷದ ಪುರುಷನಲ್ಲಿ, 62 ವರ್ಷದ ಮಹಿಳೆಯಲ್ಲಿ ಹಾಗೂ ಕಲಬುರಗಿಯ 60 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಇಂದು ಸಂಜೆ ತಿಳಿಸಿದೆ.

40 ವರ್ಷದ ವ್ಯಕ್ತಿ ಮಾರ್ಚ್ 20ರಂದು ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಇನ್ನು 14 ದಿನಗಳ ನಂತರ ಕಲಬುರಗಿಯಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದ್ದು, ಕೊರೋನಾದಿಂದ ಮೃತಪಟ್ಟ ವೃದ್ಧನಿಗೆ ಚಿಕಿತ್ಸೆ ನೀಡಿದ ವೈದ್ಯರ ಪತ್ನಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಬೆಂಗಳೂರಿನಿಂದ ಬಳ್ಳಾರಿಯ ಹೊಸಪೇಟೆಗೆ ಪ್ರಯಾಣಿಸಿದ್ದ ಒಂದೇ ಕುಟುಂಬದ ಮೂವರಲ್ಲಿ ಸೋಂಕು ಇರುವುದು ನಿನ್ನೆ ದೃಢಪಟ್ಟಿದೆ. ಕುಟುಂಬದ 52 ವರ್ಷದ ಪುರುಷ, 26 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ. ಇವರು ಮಾ. 16ರಂದು ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದರು. ಅಲ್ಲದೆ, 59ನೇ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದ 40 ವರ್ಷದ ಪುರುಷನಿಗೆ ಸೊಂಕು ಪತ್ತೆಯಾಗಿದೆ.

ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ 40 ವರ್ಷದ ಮಹಿಳೆಯಲ್ಲಿ ಕೂಡ ಸೋಂಕು ದೃಢಪಟ್ಟಿದೆ. 

ಮೈಸೂರಿನಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, 35 ಹಾಗೂ 41 ವರ್ಷದ ಪುರುಷರಲ್ಲಿ ಸೋಂಕಿರುವುದು ಪತ್ತೆಯಾಗಿದ್ದು, ಇದರೊಂದಿಗೆ ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡದಲ್ಲಿ 37 ವರ್ಷದ ಪುರುಷ ಹಾಗೂ ದುಬೈಯಿಂದ ಮಾ.20ರಂದು ಗೋವಾ ವಿಮಾನ ನಿಲ್ದಾಣದಿಂದ ಭಟ್ಕಳಕ್ಕೆ ಬಂದಿದ್ದ ಯುವಕನಲ್ಲಿ ಕೊರೋನಾ ವೈರಸ್ ಇರುವ ಬಗ್ಗೆ ಮಂಗಳವಾರ ದೃಢವಾಗಿದೆ.

ಈ ಮೊದಲು ದೃಢಪಟ್ಟಿದ್ದ ಭಟ್ಕಳ ಮೂಲದ 22 ವರ್ಷದ ಸೋಂಕಿತ ಯುವಕನ ಸಹೋದರನಾಗಿರುವ ಈತ ಇಬ್ಬರೂ ಗೋವಾದ ದಾಬೋಲಿಯಮ್ ವಿಮಾನ ನಿಲ್ದಾಣದಿಂದ ಕಾರವಾರ ಮೂಲಕ ಭಟ್ಕಳಕ್ಕೆ ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದುಬೈನಿಂದ ಬಂದಿದ್ದ 65 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಬಳಿಕ ಈ ವ್ಯಕ್ತಿಯ ಕುಟುಂಬದವರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಇವರ 55 ವರ್ಷದ ಪತ್ನಿ , 22 ಹಾಗೂ 28 ವರ್ಷದ ಪುತ್ರಿಯರಿಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com