ಏಪ್ರಿಲ್ 12ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದ ರಾಜ್ಯ ಸರ್ಕಾರ

ರಾಜ್ಯಾದ್ಯಂತ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ ಇತ್ತ ರಾಜ್ಯ ಸರ್ಕಾರ ಇದೇ ಏಪ್ರಿಲ್ 12ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ ಇತ್ತ ರಾಜ್ಯ ಸರ್ಕಾರ ಇದೇ ಏಪ್ರಿಲ್ 12ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದೆ.

ಈ ಕುರಿತಂತೆ ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಏಪ್ರಿಲ್ 12ರಿಂದ ರಾಜ್ಯದ ಎಲ್ಲಾ ಶಾಲೆಗಳಿಗೆ ಬೇಸಿಗೆ ರಜೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ ಎಂದು ಹೇಳಿದೆ. ಇದರ ಜೊತೆಗೆ ಸುತ್ತೋಲೆಯಲ್ಲಿ ಶಿಕ್ಷಕರಿಗೆ ಕೆಲ ನಿಯಮಗಳನ್ನು ಸೂಚಿಸಿರುವ ಸರ್ಕಾರ, ಶಿಕ್ಷಕರು  ಕೇಂದ್ರ ಸ್ಥಾನ ಬಿಡುವಂತಿಲ್ಲ ಹಾಗೂ ಅವರ ತಮ್ಮ ಮೊಬೈಲ್ ನಂಬರ್ ಗಳನ್ನ ಬಿಇಓಗಳಿಗೆ ನೀಡಬೇಕು. ಅಗತ್ಯ ತುರ್ತು ಸೇವೆ ಇದ್ದರೆ ಕರೆ ಮಾಡಿದಾಗ ಬಂದು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸರ್ಕಾರ ಆದೇಶ ನೀಡಿದೆ.

ದೇಶದಲ್ಲಿ ಕೊರೋನಾ ವೈರಸ್ ಸೋಂಕು ಪ್ರಕರಣಗಳು ದೇಶದಲ್ಲಿ ಹೆಚ್ಚಾದದ ಕಾರಣ ಈ ಮೊದಲೇ ಶಾಲೆಗಳಿಗೆ ಏಪ್ರಿಲ್ 11ರ ವರೆಗೆ ರಜೆ ಘೋಷಣೆ ಮಾಡಲಾಗಿತ್ತು. 
 

ಸರ್ಕಾರದ ಆದೇಶ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com