ಹಣ್ಣು-ತರಕಾರಿ ಸರಬರಾಜಿಗೆ ವಿನಾಯಿತಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ರೈತರು ಬೆಳೆದಿರುವ ತೋಟಗಾರಿಕೆ ಉತ್ಪನ್ನಗಳಾದ ಹಣ್ಣು ಮತ್ತು ತರಕಾರಿಗಳನ್ನು ಸರಬರಾಜು ಮಾಡಲು ಲಾಕ್ ಡೌನ್ ಆದೇಶದಿಂದ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಹಣ್ಣು-ತರಕಾರಿ ಸರಬರಾಜಿಗೆ ವಿನಾಯಿತಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ರೈತರು ಬೆಳೆದಿರುವ ತೋಟಗಾರಿಕೆ ಉತ್ಪನ್ನಗಳಾದ ಹಣ್ಣು ಮತ್ತು ತರಕಾರಿಗಳನ್ನು ಸರಬರಾಜು ಮಾಡಲು ಲಾಕ್ ಡೌನ್ ಆದೇಶದಿಂದ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ತೋಟಗಾರಿಕೆ ಬೆಳೆಗಳನ್ನು ದಾಸ್ತಾನು ಮಾಡಿಕೊಂಡಿರುವ ರೈತರು, ಹಣ್ಣು ಮತ್ತು ತರಕಾರಿಗಳನ್ನು ಆಯಾ ಮಾರುಕಟ್ಟೆ, ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಾಗಿಸಲು ಅನುಮತಿ ನೀಡಲಾಗಿದೆ. ಜಿಲ್ಲೆಯ ತೋಟಗಾರಿಕೆ ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಸಗಟು ವ್ಯಾಪಾರಿಗಳು ಖರೀದಿಸಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಸಗಟು ವ್ಯಾಪಾರಿಗಳು ತೋಟಗಾರಿಕೆಗೆ ಸಂಬಂಧಿಸಿದ ಕೂಲಿಕಾರರಿಗೆ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಗಳನ್ನು ಒದಗಿಸಬೇಕು ಮತ್ತು ಕಡ್ಡಾಯವಾಗಿ ಉಪಯೋಗಿಸುವ ಮೂಲಕ ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮಾರಾಟ ವ್ಯವಹಾರ ನಡೆಸಬೇಕು ಎಂದು ಸೂಚಿಸಿದ್ದಾರೆ. ಪಾಸ್ ಗಳಿಗೆ ಆಯಾ ತಾಲ್ಲೂಕು ತಹಶೀಲ್ದಾರ್ ಹಾಗೂ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು. ಅಲ್ಲದೇ ಸಾಗಾಣಿಕೆ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ ಉತ್ಪನ್ನಗಳ ಮಾರುಕಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com