ಕುರಿಗಳಿಂದ ಕೊರೋನಾ ಸೋಂಕು ಹರಡುತ್ತದೆ ಎಂಬುದು ತಪ್ಪು ಕಲ್ಪನೆ, ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ: ಸಿದ್ದರಾಮಯ್ಯ

ಕುರಿಗಳಿಂದ ಕೊರೋನಾ ಸೋಂಕು ತಗುಲುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹಳ್ಳಿಗಳಲ್ಲಿ ಕುರಿಗಳಿಗೆ ಹಿಂಸೆ ನೀಡುವುದು, ಕುರಿಗಾಹಿಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ ಎಂಬ ವಿಷಯ ಗಮನಕ್ಕೆ ಬಂದಿದೆ, ಈ ಬಗ್ಗೆ ಸರ್ಕಾರ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಕುರಿಗಳಿಂದ ಕೊರೋನಾ ಸೋಂಕು ತಗುಲುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹಳ್ಳಿಗಳಲ್ಲಿ ಕುರಿಗಳಿಗೆ ಹಿಂಸೆ ನೀಡುವುದು, ಕುರಿಗಾಹಿಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ ಎಂಬ ವಿಷಯ ಗಮನಕ್ಕೆ ಬಂದಿದೆ, ಈ ಬಗ್ಗೆ ಸರ್ಕಾರ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕುರಿಗಳನ್ನು ಹೆಚ್ಚಾಗಿ ಸಾಕುವ ತುಮಕೂರಿನ ಸಿರಾ, ಚಿಕ್ಕನಾಯಕನಹಳ್ಳಿ, ಹಿರಿಯೂರು, ಮಧುಗಿರಿ, ಹೊಸದುರ್ಗ ಕಡೆ ಕುರಿಗಾಹಿಗಳನ್ನು ಓಡಿಸುವ, ಕುರಿಗಳಿಗೆ ಹಿಂಸೆ ನೀಡುವ ಕೆಲಸವನ್ನು ಜನರು ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಕುರಿಗಾಹಿಗಳಿಗೆ ರಕ್ಷಣೆ ಕೊಟ್ಟು ಕುರಿ ಮೇಯಿಸುವ ಅವಕಾಶ ಕಲ್ಪಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com