ರೈತರು ಬೆಳೆದ ಉತ್ಪನ್ನಗಳನ್ನು ಸರ್ಕಾರ ಖರೀದಿಸಿ ಅಗತ್ಯವಿರುವವರಿಗೆ ಉಚಿತವಾಗಿ ನೀಡಲಿ:ಸಿದ್ದರಾಮಯ್ಯ

ಲಾಕ್ ಡೌನ್ ಕಾರಣದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಜನರ ಸಹಾಯಕ್ಕೆ ಸರ್ಕಾರ ಮುಂದಾಗದಿದ್ದರೆ ಬೀದಿಗೆ ಬಂದು ಹೋರಾಟ ನಡೆಸುವುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ನೇತೃತ್ವದಲ್ಲಿ ನಿನ್ನೆ ಬೆಂಗಳೂರಿನಲ್ಲಿ ನಡೆದ ಸಭೆ
ಕಾಂಗ್ರೆಸ್ ನೇತೃತ್ವದಲ್ಲಿ ನಿನ್ನೆ ಬೆಂಗಳೂರಿನಲ್ಲಿ ನಡೆದ ಸಭೆ

ಬೆಂಗಳೂರು: ಲಾಕ್ ಡೌನ್ ಕಾರಣದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಜನರ ಸಹಾಯಕ್ಕೆ ಸರ್ಕಾರ ಮುಂದಾಗದಿದ್ದರೆ ಬೀದಿಗೆ ಬಂದು ಹೋರಾಟ ನಡೆಸುವುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ವೈರಸ್ ಲಾಕ್ ಡೌನ್ ನ ಕಾರಣದಿಂದ ರಾಜ್ಯದ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್, ಜೆಡಿಎಸ್ ಮತ್ತು ರೈತ ಸಂಘಗಳ ಪ್ರತಿನಿಧಿಗಳು ನಿನ್ನೆ ಸಭೆ ಸೇರಿ ಚರ್ಚೆ ನಡೆಸಿದ್ದರು. ಹಲವು ವಿಷಯಗಳ ಕುರಿತು ಚರ್ಚೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಕುರಿತು ಸಭೆಯ ಅಂತ್ಯಕ್ಕೆ ತೀರ್ಮಾನ ಕೈಗೊಳ್ಳಲಾಯಿತು.

‘’ಈ ಸಂದರ್ಭದಲ್ಲಿ ನಾವು ಮಾಡುತ್ತಿರುವುದು ಚುನಾವಣಾ ರಾಜಕೀಯವಲ್ಲ.ಲಾಕ್ ಡೌನ್ ನಿಂದಾಗಿ ತೀವ್ರ ಸಮಸ್ಯೆ ಎದುರಿಸುತ್ತಿರುವ ರೈತರು, ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ಇತರ ಬಡ, ಕೆಳ ಮಧ್ಯಮ ವರ್ಗದವರಿಗೆ ಸಹಾಯ ಮಾಡುವುದು ನಮ್ಮ ಉದ್ದೇಶವಾಗಿದೆ. ನಮ್ಮ ಬೇಡಿಕೆಗಳನ್ನು ಪಟ್ಟಿ ಮಾಡಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಿದ್ದೇವೆ. ಸರ್ಕಾರ ಸಮಸ್ಯೆಯಲ್ಲಿರುವವರಿಗೆ ಸಹಾಯ ಮಾಡದಿದ್ದರೆ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ’’ಎಂದು ಸಭೆಯ ಬಳಿಕ ಸಿದ್ದರಾಮಯ್ಯ ಹೇಳಿದರು.

ಸರ್ಕಾರದ ಮಾಹಿತಿ ಪ್ರಕಾರ ಒಟ್ಟು 64 ಸಾವಿರದ 340 ಹೆಕ್ಟೇರ್ ಪ್ರದೇಶದಲ್ಲಿ 17.38 ಲಕ್ಷ ಟನ್ ತರಕಾರಿ ಬೆಳೆ ಮತ್ತು 1.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 32.55 ಲಕ್ಷ ಟನ್ ಹಣ್ಣಿನ ಬೆಳೆ ನಿರೀಕ್ಷಿಸಲಾಗಿದೆ. ಆದರೆ ಲಾಕ್ ಡೌನ್ ನಿಂದಾಗಿ ಬೆಳೆದ ಬೆಳೆಗಳನ್ನು ಸಾಗಿಸಲಾಗದೆ ರೈತರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ರೈತರ ಉತ್ಪನ್ನಗಳನ್ನು ಸಂಗ್ರಹಿಸಲಾಗುವುದು ಎಂದು ಸರ್ಕಾರ ಈ ಹಿಂದೆ ಹೇಳಿದ್ದರೂ ಕೂಡ ಸರ್ಕಾರ ಇನ್ನೂ ಆ ಕೆಲಸ ಆರಂಭಿಸಿಲ್ಲ ಎಂದು ರೈತ ಸಂಘದ ನಾಯಕರು ಹೇಳುತ್ತಾರೆ.

ಸಭೆಯಲ್ಲಿ ಜೆಡಿಎಸ್ ನಿಂದ ಹಿರಿಯ ನಾಯಕರಾದ ಹೆಚ್ ಡಿ ರೇವಣ್ಣ, ಬಂಡೆಪ್ಪ ಕಾಶಂಪುರ್, ಕಾಂಗ್ರೆಸ್ ನಿಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್ ಆರ್ ಪಾಟೀಲ್, ಸಿಪಿಐಎಂ ನಾಯಕ ನಾಗರಾಜು, ರೈತ ಸಮುದಾಯದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಕುರುಬೂರು ಶಾಂತಕುಮಾರ್ ಮೊದಲಾದವರು ಭಾಗವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com