ಕೋವಿಡ್-19: ರಾಜ್ಯದಲ್ಲಿ ಇಂದು ಹೊಸದಾಗಿ 12 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 601ಕ್ಕೆ ಏರಿಕೆ, 25 ಸಾವು

ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಇಂದು ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮತ್ತೆ 12 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 601ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಇಂದು ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮತ್ತೆ 12 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 601ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

ಇಂದು ಸಂಜೆ ಇಲಾಖೆ ಬಿಡುಗಡೆಗೊಳಿಸಿರುವ ಬುಲೆಟಿನ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ದಾವಣಗೆರೆಯ 69 ವರ್ಷದ ವ್ಯಕ್ತಿ, ಬೀದರ್ ನ 82 ವರ್ಷದ ವ್ಯಕ್ತಿ ಹಾಗೂ ಬೆಂಗಳೂರು ಗ್ರಾಮಂತರಕ್ಕೆ ಸೇರಿದ 63 ವರ್ಷದ ವ್ಯಕ್ತಿ ಮಹಾಮಾರಿಗೆ ಬಲಿಯಾಗಿದ್ದಾರೆಂದು ತಿಳಿಸಿದೆ. ಒಟ್ಟು ಮೃತಪಟ್ಟವರ ಸಂಖ್ಯೆ 25.

ಈ ನಡುವೆ ರಾಜ್ಯದಲ್ಲಿ ಇಂದು ಮತ್ತೆ 12 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 601ಕ್ಕೆ ಏರಿಕೆಯಾಗಿದೆ. 

ವಿಜಯಪುರ, ತುಮಕೂರು ಜಿಲ್ಲೆಯಲ್ಲಿ ತಲಾ ಇಬ್ಬರಲ್ಲಿ ಸೋಂಕು ಪತ್ತೆಯಾಗಿದ್ದರೆ, ಬೀದರ್, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಜಿಲ್ಲೆ, ಬೆಳಗಾವಿ ಹಾಗೂ ಬಾಗಲಕೋಟೆಯ ಜಮಖಂಡಿಯಲ್ಲಿ ತಲಾ ಒಂದೊಂದು ಹೊಸ ಪ್ರಕರಣಗಳು ಬೆಳಕಿಗೆ ಬಂದವು. ಇದೀಗ ಬೆಂಗಳೂರಿನಲ್ಲೇ ಹೊಸದಾಗಿ 3 ಪ್ರಕರಣಗಳು ಪತ್ತೆಯಾಗಿವೆ.  

ಇದರಂತೆ ಸೋಂಕಿತ 601 ಮಂದಿಯ ಪೈಕಿ 271 ಮಂದಿ ವೈರಸ್ ನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com