ಕೊಯ್ನಾ, ಉಜಿನಿ ಜಲಾಶಯಗಳಿಂದ ನೀರು ಬಿಡಿ: ಮಹಾರಾಷ್ಟ್ರಕ್ಕೆ ಸಿಎಂ ಯಡಿಯೂರಪ್ಪ ಮನವಿ

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಕುಡಿಯುವ ನೀರು ಸಮಸ್ಯೆ ಎದುರಾಗಿದ್ದು, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮೂರು ಟಿಎಂಸಿ, ಉಜಿನಿ ಜಲಾಶಯದಿಂದ ಭೀಮಾ ನದಿಗೆ ಇನ್ನೂ ಮೂರು ಟಿಎಂಸಿ ನೀರು ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಮನವಿ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಕುಡಿಯುವ ನೀರು ಸಮಸ್ಯೆ ಎದುರಾಗಿದ್ದು, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮೂರು ಟಿಎಂಸಿ, ಉಜಿನಿ ಜಲಾಶಯದಿಂದ ಭೀಮಾ ನದಿಗೆ ಇನ್ನೂ ಮೂರು ಟಿಎಂಸಿ ನೀರು ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ತೀವ್ರ ಒಣ ಹವೆ ಮುಂದುವರಿದಿರುವ ಹಿನ್ನಲೆಯಲ್ಲಿ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆ ಸೇರಿ ಉತ್ತರ ಕರ್ನಾಟಕ ಪ್ರದೇಶ ತೀವ್ರ ರೀತಿಯ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಉದ್ದವ್ ಠಾಕ್ರೆ ಅವರಿಗೆ ಬರದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರ ಈ ಹಿಂದೆ ಮಾಡಿಕೊಂಡಿದ್ದ ಎಲ್ಲ ಮನವಿಗಳಿಗೆ ಮಹಾರಾಷ್ಟ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಕೊಯ್ನಾ ಜಲಾಶಯದಿಂದ ರಾಜ್ಯಕ್ಕೆ ನೀರು ಬಿಡುಗಡೆಮಾಡಿದೆ ಎಂಬುದನ್ನು ಪತ್ರದಲ್ಲಿ ಸ್ಮರಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಿ ರಾಜ್ಯಕ್ಕೆ ನೀರು ಬಿಡುಗಡೆಮಾಡಬೇಕು ಎಂದು ಪತ್ರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ ಅವರಿಗೆ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com