ಮೈಸೂರು ಮೃಗಾಲಯ ನಿರ್ವಹಣೆಗೆ ಅಮೆರಿಕದಿಂದ ಬಂತು ದೇಣಿಗೆ: ಸಚಿವರ ಮನವಿಗೆ ಸ್ಪಂದನೆ

ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯ ನಿರ್ವಹಣೆಗೋಸ್ಕರ ನಾಗರಿಕರು ದೇಣಿಗೆ ನೀಡಿ ಸಹಕರಿಸುವಂತೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ವಾಟ್ಸಪ್ ಮೂಲಕ ಮಾಡಿದ ಮನವಿಗೆ ಸ್ಪಂದಿಸಿದ್ದರು.
ಮೈಸೂರು ಮೃಗಾಲಯ
ಮೈಸೂರು ಮೃಗಾಲಯ

ಮೈಸೂರು: ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯ ನಿರ್ವಹಣೆಗೋಸ್ಕರ ನಾಗರಿಕರು ದೇಣಿಗೆ ನೀಡಿ ಸಹಕರಿಸುವಂತೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ವಾಟ್ಸಪ್ ಮೂಲಕ ಮಾಡಿದ ಮನವಿಗೆ ಸ್ಪಂದಿಸಿದ ಅಮೆರಿಕದ ಫೀನಿಕ್ಸ್ ನ ಜ್ಯೋತಿ ವಿಕಾಸ್ ಎಂಬುವರು ತಮ್ಮ ಮಗಳ ಹೆಸರಿನಲ್ಲಿ 25,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಸಚಿವರ ವಾಟ್ಸಪ್ ಸಂದೇಶದ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ ಅವರು, ಪ್ರಾಣಿ-ಪಕ್ಷಿಗಳ ನಿರ್ವಹಣೆಗೋಸ್ಕರ ತಮ್ಮದೂ ಒಂದು ಕೊಡುಗೆ ಇರಬೇಕು ಎಂದು ಅನ್ನಿಸಿ ತಕ್ಷಣ ತಮ್ಮ ಪುತ್ರಿ ಪ್ರಿಶಾ ಹೆಸರಿನಲ್ಲಿ 25,000 ರೂಪಾಯಿ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. 

ಪ್ರಿಶಾ ನಮ್ಮ ಒಂದು ವರ್ಷದ ಮಗಳಾಗಿದ್ದು, ಆಕೆಯ ಹೆಸರಿನಲ್ಲಿ 2 ತಿಂಗಳ ಅವಧಿಗೆ ಆನೆಯೊಂದನ್ನು ದತ್ತು ತೆಗೆದುಕೊಂಡಿದ್ದೇವೆ. ಸಚಿವರು ಮಾಡಿದ ಮನವಿಯನ್ನು ಮಾಧ್ಯಮಗಳ ಮೂಲಕ ಗಮನಿಸಿ ದತ್ತು ತೆಗೆದುಕೊಳ್ಳುವ ನಿರ್ಧಾರ ಮಾಡಿದೆವು. ಜೊತೆಗೆ ಇಲ್ಲಿನ ದಾನಿಗಳಿಂದ ಪ್ರಾಣಿಗಳಿಗೆ ಸಹಾಯಧನವನ್ನು ಸಂಗ್ರಹಿಸಲು ನಮ್ಮ ಬಳಗ ನಿರ್ಧರಿಸಿದೆ ಎಂದು ಅಮೆರಿಕದ ಫೀನಿಕ್ಸ್ ನಗರದಲ್ಲಿರುವ ಜ್ಯೋತಿ ವಿಕಾಸ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com