ಸಣ್ಣ ಕೈಗಾರಿಕೆಗಳ ಚಟುವಟಿಕೆಗಳ ಪುನರ್‌ ಆರಂಭಕ್ಕೆ ಸರ್ಕಾರ ಆರ್ಥಿಕ ನೆರವು ಒದಗಿಸಿ: ಸಿದ್ದರಾಮಯ್ಯ

ಕಳೆದ ನಲವತ್ತು ದಿನಗಳಿಂದ ಸಣ್ಣ ಕೈಗಾರಿಕೆಗಳಲ್ಲಿ ಉತ್ಪಾದನಾ ಚಟುವಟಿಕೆ ಬಂದ್ ಆಗಿದ್ದು, ಸರ್ಕಾರಕ್ಕೆ ಬರಬೇಕಾದ ಆದಾಯವೂ ನಿಂತು ಹೋಗಿದೆ. ಸಣ್ಣ ಕೈಗಾರಿಕೆಗಳ ಚಟುವಟಿಕೆಗಳು‌‌ ಪುನರ್‌ ಆರಂಭಕ್ಕೆ ಸರ್ಕಾರ ಆರ್ಥಿಕ ನೆರವು ಒದಗಿಸಬೇಕೆಂದು ವಿಪಕ್ಷ‌ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ‌
ಸಿದ್ದರಾಮಯ್ಯ, ಸಣ್ಣ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು
ಸಿದ್ದರಾಮಯ್ಯ, ಸಣ್ಣ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು

ಬೆಂಗಳೂರು:ಕಳೆದ ನಲವತ್ತು ದಿನಗಳಿಂದ ಸಣ್ಣ ಕೈಗಾರಿಕೆಗಳಲ್ಲಿ ಉತ್ಪಾದನಾ ಚಟುವಟಿಕೆ ಬಂದ್ ಆಗಿದ್ದು, ಸರ್ಕಾರಕ್ಕೆ ಬರಬೇಕಾದ ಆದಾಯವೂ ನಿಂತು ಹೋಗಿದೆ. ಸಣ್ಣ ಕೈಗಾರಿಕೆಗಳ ಚಟುವಟಿಕೆಗಳು‌‌ ಪುನರ್‌ ಆರಂಭಕ್ಕೆ ಸರ್ಕಾರ ಆರ್ಥಿಕ ನೆರವು ಒದಗಿಸಬೇಕೆಂದು ವಿಪಕ್ಷ‌ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ‌

ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಪೀಣ್ಯ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ಬಳಿಕ ಮಾತನಾಡಿದ ಅವರು, ಕಾರ್ಖಾನೆ ಮಾಲೀಕರು ಬ್ಯಾಂಕ್‍ಗಳ ಮೂಲಕ ಪಡೆದಿರುವ ಸಾಲದ ಮೇಲಿನ ಬಡ್ಡಿ ಮನ್ನಾ, ಮಾಸಿಕ ಕಂತು ಪಾವತಿಗೆ ವಿನಾಯಿತಿ, ಉತ್ಪನ್ನಗಳ ರಫ್ತಿಗೆ ಉತ್ತೇಜನ ಸೇರಿದಂತೆ ವಿಶೇಷ ಸೌಲಭ್ಯಗಳನ್ನು ಒದಗಿಸಿದರೆ ಮಾತ್ರ ಸಣ್ಣ ಕೈಗಾರಿಕೆಗಳು ಮತ್ತು ಆ ಕೈಗಾರಿಕೆಗಳನ್ನು ಅವಲಂಬಿಸಿರುವ ಕಾರ್ಮಿಕರಿಗೆ ಅನುಕೂಲವಾಗಲಿದೆ. ಈಗಾಗಲೇ ನಷ್ಟ ಅನುಭವಿಸಿರುವ ಕೆಲ ಕಾರ್ಖಾನೆಗಳು ಮತ್ತೆ ಉತ್ಪಾದನೆ ಆರಂಭಕ್ಕೆ ಬಂಡವಾಳ ಅಗತ್ಯ. ಈ ಬಗ್ಗೆಯೂ ಸರ್ಕಾರ ಗಮನ ಹರಿಸಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಇವರಿಗೆ ಸರ್ಕಾರ ನೆರವು ಒದಗಿಸದಿದ್ದರೆ ಸಾವಿರಾರು ಕಾರ್ಖಾನೆಗಳು ಮುಚ್ಚುವುದರ ಜೊತೆಗೆ ಆ ಕಾರ್ಖಾನೆಗಳನ್ನೇ ಜೀವನಾಧಾರವಾಗಿ ಮಾಡಿಕೊಂಡಿರುವ ಕಾರ್ಮಿಕರು ಬೀದಿಪಾಲಾಗುವ ಸಾಧ್ಯತೆಯಿದೆ‌ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು

ಲಾಕ್ ಡೌನ್ ಹಿನ್ನೆಲೆಯಲ್ಲಿ ತೀವ್ರ ನಷ್ಟಕ್ಕೆ ಒಳಗಾಗಿರುವ ರಾಜ್ಯದ ಸಣ್ಣ ಕೈಗಾರಿಕೆಗಳ ನೆರವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಶೇಷ ಯೋಜನೆ ರೂಪಿಸುವ ಅಗತ್ಯವಿದೆ. ಸಣ್ಣ ಕೈಗಾರಿಕೆಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದ್ದಂತಿಲ್ಲ. ಇದುವರೆಗೂ ಸಂಘಗಳ ಪದಾಧಿಕಾರಿಗಳ ಜೊತೆ ಸರ್ಕಾರ ಮಾತುಕತೆ ನಡೆಸಿಲ್ಲ. ನಷ್ಟದಲ್ಲಿರುವ ಸಣ್ಣ ಕೈಗಾರಿಕೆಗಳು ಚೇತರಿಸಿಕೊಳ್ಳಬೇಕಾದರೆ ಕೆಲವೊಂದು ರಿಯಾಯಿತಿಗಳನ್ನು ಸರ್ಕಾರ ಘೋಷಣೆ ಮಾಡಬೇಕೆಂದು ಆಗ್ರಹಿಸಿದರು

ಸಭೆಯಲಿ ಎಫ್ ಐ ಆರ್ ಸಿ ಬಿಲ್ಲುಗಳನ್ನು ಪಾವತಿ ಮನಾಡಲು ಅವಧಿ ವಿಸ್ತರಣೆ,ಮಾಸಿಕ ವಿದ್ಯುತ್ ಶುಲ್ಕ ಪಾವತಿ ಒಂದು ವರ್ಷದವರೆಗೆ ಮನ್ನಾ. ಕಾರ್ಮಿಕರ ಇಎಸ್‍ಐ, ಪಿಎಫ್ ವಂತಿಗೆ ಪಾವತಿ ಆರು ತಿಂಗಳ ವರೆಗೆ ಮನ್ನಾ, ಬ್ಯಾಂಕ್ ಸಾಲದ ಮೇಲಿನ ಬಡ್ಡಿ ಮನ್ನಾ, ಬಂಡಿ ಮತ್ತು ದಂಡ ಬಡ್ಡಿ ಕೈ ಬಿಡುವುದು, ಬಿಬಿಎಂಪಿಗೆ ಸಂದಾಯ ಮಾಡಬೇಕಿರುವ ಆಸ್ತಿ ತೆರಿಗೆಯ ನಿಧಾನ ಪಾವತಿಯ ಮೇಲಿನ ಬಡ್ಡಿ, ನಿಗದಿತ ಮೊಬಲಗನ್ನು ಡಿಸೆಂಬರ್ ವರೆಗೆ ಮುಂದೂಡುವುದು, ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ವೇತನವನ್ನು ರಾಜ್ಯ ಸರ್ಕಾರ ಶೇ. 50ರಷ್ಟು ಭರಿಸುವ ಬಗ್ಗೆ ಬೇಡಿಕೆ ಸಲ್ಲಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com