ಆತಂಕದಲ್ಲಿದ್ದ ಬೆಳಗಾವಿ ಜನತೆಗೆ ಗುಡ್ ನ್ಯೂಸ್: ಸೋಂಕಿತರ ಸಂಖ್ಯೆಗಿಂತಲೂ ಗುಣಮುಖರಾಗುತ್ತಿರುವ ಸಂಖ್ಯೆಯಲ್ಲಿ ಏರಿಕೆ

ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದ ಹಿನ್ನೆಲೆಯಲ್ಲಿ ಆತಂಕಕ್ಕೀಡಾಗಿದ್ದ ಬೆಳಗಾವಿ ಜನತೆಗೆ ಇದೀಗ ತುಸು ನೆಮ್ಮದಿ ಬರುವಂತಹ ಬೆಳವಣಿಗೆಗಳು ಕಂಡು ಬರುತ್ತಿವೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಗಿಂತಲೂ ಗುಣುಖರಾಗುತ್ತಿರುವ ಸಂಖ್ಯೆ ಇತ್ತೀಚೆಗೆ ಏರಿಕೆಯಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದ ಹಿನ್ನೆಲೆಯಲ್ಲಿ ಆತಂಕಕ್ಕೀಡಾಗಿದ್ದ ಬೆಳಗಾವಿ ಜನತೆಗೆ ಇದೀಗ ತುಸು ನೆಮ್ಮದಿ ಬರುವಂತಹ ಬೆಳವಣಿಗೆಗಳು ಕಂಡು ಬರುತ್ತಿವೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಗಿಂತಲೂ ಗುಣುಖರಾಗುತ್ತಿರುವ ಸಂಖ್ಯೆ ಇತ್ತೀಚೆಗೆ ಏರಿಕೆಯಾಗುತ್ತಿದೆ. 

ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಇದೀಗ ಸೋಂಕಿನಿಂದ ಬಳಲುತ್ತಿದ್ದ ಐವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ತಿಳಿದುಬಂದಿದೆ. 

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ನಾಲ್ವರು ಮಹಿಳೆಯರು ರೋಗಿ ಸಂಖ್ಯೆ 282, 285 ಮತ್ತು 288 ಹಾಗೂ ಒಬ್ಬ ಪುರುಷ 283 ಬಿಡುಗಡೆಯಾಗಿದ್ದಾರೆ. 

ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 73 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದೀಗ ಒಟ್ಟಾರೆ 15 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೆ. ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com