ರೆಡ್ ಜೋನ್ ಪರಾಮರ್ಶೆಗೆ ಕೇಂದ್ರಕ್ಕೆ ಮೊರೆ ಹೋಗಲು ರಾಜ್ಯ ನಿರ್ಧಾರ:ಆರ್ಥಿಕ ಚಟುವಟಿಕೆ ಆರಂಭಕ್ಕೆ ಒಲವು

ಲಾಕ್ ಡೌನ್ ವಿಸ್ತರಣೆ ಮಾಡಿ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮಾರ್ಗಸೂಚಿ ಹೊರಡಿಸಿರುವ ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಮೂರು ಜಿಲ್ಲೆಗಳನ್ನು ರೆಡ್ ಜೋನ್(ಕೆಂಪು ವಲಯ) ಎಂದು ಗುರುತಿಸಿದೆ. ಹೀಗೆ ಕೇಂದ್ರ ಸರ್ಕಾರ ಗುರುತಿಸಿರುವ ವಲಯಗಳನ್ನು ಮರುಪರಿಶೀಲನೆ ಮಾಡಬೇಕು ಎಂದು ಕೇಂದ್ರ ಸರ್ಕಾರದ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮಂಡ್ಯ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಬೆಲ್ಲ ತಯಾರಿ
ಮಂಡ್ಯ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಬೆಲ್ಲ ತಯಾರಿ

ಬೆಂಗಳೂರು: ಲಾಕ್ ಡೌನ್ ವಿಸ್ತರಣೆ ಮಾಡಿ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮಾರ್ಗಸೂಚಿ ಹೊರಡಿಸಿರುವ ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಮೂರು ಜಿಲ್ಲೆಗಳನ್ನು ರೆಡ್ ಜೋನ್(ಕೆಂಪು ವಲಯ) ಎಂದು ಗುರುತಿಸಿದೆ. ಹೀಗೆ ಕೇಂದ್ರ ಸರ್ಕಾರ ಗುರುತಿಸಿರುವ ವಲಯಗಳನ್ನು ಮರುಪರಿಶೀಲನೆ ಮಾಡಬೇಕು ಎಂದು ಕೇಂದ್ರ ಸರ್ಕಾರದ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದೇ ಸಮಯದಲ್ಲಿ ಕಂಟೈನ್ ಮೆಂಟ್ ಪ್ರದೇಶದ ಹೊರವಲಯಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಮರು ಆರಂಭಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದೆ.

ಕೆಂಪು ವಲಯ ಎಂದು ಗುರುತಿಸಿರುವ ಬೆಂಗಳೂರು ಗ್ರಾಮಾಂತರವನ್ನು ಹಸಿರು ವಲಯ ಎಂದು ಕೆಂಪು ವಲಯದಲ್ಲಿರುವ ಮೈಸೂರನ್ನು ಆರೆಂಜ್ ವಲಯ ಎಂದು ಮರು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊರೋನಾ ವೈರಸ್ ತಡೆಗೆ ಕೆಂಪು ವಲಯಗಳಲ್ಲಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. 6 ಕೊರೋನಾ ಸೋಂಕಿತ ಕೇಸುಗಳನ್ನು ಹೊಂದಿದ್ದ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಎಲ್ಲರೂ ಗುಣಮುಖರಾಗಿದ್ದಾರೆ. 88 ಸೋಂಕಿತ ಪ್ರಕರಣಗಳನ್ನು ಹೊಂದಿದ್ದ ಮೈಸೂರಿನಲ್ಲಿ ಇದೀಗ ಗುಣಮುಖ ಹೊಂದಿದವರ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ಮೈಸೂರಿನಲ್ಲಿ 24 ಕೊರೋನಾ ಸೋಂಕಿತ ಕೇಸುಗಳಿದ್ದು 64 ಮಂದಿ ಗುಣಮುಖರಾಗಿ ಹೊರಬಂದಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ಕಂದಾಯ ಸಚಿವ ಆರ್ ಅಶೋಕ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಕೊರೋನಾ ರೆಡ್ ಜೋನ್ ಪಟ್ಟಿಯಿಂದ ಹೊರಹಾಕಲು ಕೇಂದ್ರ ಸರ್ಕಾರದ ಮೊರೆ ಹೋಗಲಾಗುವುದು ಎಂದು ಹೇಳಿದರು.

ಬೆಂಗಳೂರು ನಗರವನ್ನು ರೆಡ್ ಜೋನ್ ನಲ್ಲಿ ಇರಿಸಲಾಗಿದೆ. ಇಲ್ಲಿ ಒಂದು ಕೋಟಿಗೂ ಅಧಿಕ ಜನಸಂಖ್ಯೆಯಿದೆ. ಅದು ಹಲವು ಜಿಲ್ಲೆಗಳ ಒಟ್ಟು ಜನಸಂಖ್ಯೆಗೆ ಸಮನಾಗಿದೆ. ಬೆಂಗಳೂರಿನಲ್ಲಿ ಆರ್ಥಿಕ ಚಟುವಟಿಕೆ ಪುನರಾರಂಭಕ್ಕೆ ಸರ್ಕಾರ ತೀವ್ರ ಆಸಕ್ತಿ ಹೊಂದಿದ್ದು, ಕೆಲವು ಪ್ರದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿರುವ ಕಾರಣಕ್ಕೆ ಇಡೀ ಬೆಂಗಳೂರು ನಗರವನ್ನು ರೆಡ್ ಜೋನ್ ಮಾಡುವುದು ಸರಿಯಲ್ಲವೆನಿಸುತ್ತಿದೆ. ಅದರ ಬದಲು ಬೆಂಗಳೂರು ನಗರವನ್ನು 5 ಭಾಗಗಳಾಗಿ ಮಾಡಿ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿರುವ ಪ್ರದೇಶಗಳನ್ನು ರೆಡ್ ಜೋನ್ ವಲಯ ಎಂದು ಗುರುತಿಸಬಹುದು ಎಂದು ಸಚಿವ ಆರ್ ಅಶೋಕ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com