ಬೆಳಗಾವಿ: ಕುಡಕನ ರಂಪಾಟ, ತಾಯಿ, ವೈದ್ಯರ ಮೇಲೆ ಹಲ್ಲೆ ಮಾಡಿದ ಭೂಪ!

ವ್ಯಕ್ತಿಯೊಬ್ಬ ಕುಡಿದ‌ ಮತ್ತಿನಲ್ಲಿ ಕೊರೋನಾ ವಾರಿಯರ್ಸ್ ಆಗಿ ಹಗಲು ರಾತ್ರಿ ಕೇಲಸ ಮಾಡುತ್ತಿರುವ ವೈದೈರ ಮತ್ತು ತನ್ನ ತಾಯಿಯ ಮೇಲೂ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. 

Published: 05th May 2020 10:33 PM  |   Last Updated: 05th May 2020 10:33 PM   |  A+A-


DRUNK1

ವೈದ್ಯರ ಮೇಲೆ ಹಲ್ಲೆ ನಡೆಸುತ್ತಿರುವ ವ್ಯಕ್ತಿ

Posted By : lingaraj
Source : RC Network

ಬೆಳಗಾವಿ: ವ್ಯಕ್ತಿಯೊಬ್ಬ ಕುಡಿದ‌ ಮತ್ತಿನಲ್ಲಿ ಕೊರೋನಾ ವಾರಿಯರ್ಸ್ ಆಗಿ ಹಗಲು ರಾತ್ರಿ ಕೇಲಸ ಮಾಡುತ್ತಿರುವ ವೈದೈರ ಮತ್ತು ತನ್ನ ತಾಯಿಯ ಮೇಲೂ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. 

ಚಿಕ್ಕೋಡಿ ತಾಲೂಕಿನ ಬೇಡಿಕಿಹಾಳ ಗ್ರಾಮದ ಸಂಜಯ್ ಕುಮಾರ್ ಎಂಬಾತನು ಕುಡಿದ ಅಮಲಿನಲ್ಲಿ ವೈದ್ಯ ಹಾಗೂ ಸ್ವಂತಹ ತಾಯಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ವೈದ್ಯರಿಗೆ ಹಲ್ಲೆ ಮಾಡಲು ಮುಂದಾದಾಗ ತಡೆಯಲು ಬಂದ ತನ್ನ ತಾಯಿ ಮೇಲೂ ಹಲ್ಲೆ ನಡೆಸಿದ್ದಾನೆ. ಇದರಿಂದ ಕೆಲ ಹೊತ್ತು ಆಸ್ಪತ್ರೆಯಲ್ಲಿ ಗೊಂದಲ ಸೃಷ್ಠಿಯಾಗಿತ್ತು.

ಸಂಜಯ್ ಕುಮಾರ್ ಆಸ್ಪತ್ರೆಯಲ್ಲಿನ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾನೆ. ತಾನೂ ಕೂಡಾ ಬಿದ್ದು ಗಾಯ ಮಾಡಿಕೊಂಡು ನೋವಿನಿಂದ ಬಳಲುತ್ತಿದ್ದು, ನೋವು ತಾಳಲಾರದೆ ಬೇಗನೆ ಚಿಕಿತ್ಸೆ ಕೊಡಿ ಎಂದು ಒತ್ತಾಯಿಸುತ್ತಿದ್ದ. ಸಮಾದಾನ ತೆಗೆದುಕೊಳ್ಳದೆ ಹಲ್ಲೆ‌ನಡೆಸಿದ್ದಾನೆ.

ಆದರೂ ವೈದ್ಯರು ಆತನಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸದಲಗಾ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ತಕ್ಷಣ ಪೊಲೀಸರು ಸ್ಥಳಕ್ಕೆ ದಾವಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. 

ಈ ಸಂಬಂಧ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Stay up to date on all the latest ರಾಜ್ಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp