ಶಿವಾಜಿನಗರದ ಹೋಟೆಲ್ ಒಂದರ ಹೌಸ್ ಕೀಪಿಂಗ್ ಸಿಬ್ಬಂದಿಗೆ ಕೊರೋನಾ ಸೋಂಕು

ಶಿವಾಜಿನಗರದ ಹೋಟೆಲ್ ಒಂದರ ಹೌಸ್ ಕೀಪಿಂಗ್ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

Published: 05th May 2020 03:18 PM  |   Last Updated: 05th May 2020 04:15 PM   |  A+A-


COVID-19

ಸಾಂದರ್ಭಿಕ ಚಿತ್ರ

Posted By : Srinivas Rao BV
Source : Online Desk

ಬೆಂಗಳೂರು: ಶಿವಾಜಿನಗರದ ಹೋಟೆಲ್ ಒಂದರ ಹೌಸ್ ಕೀಪಿಂಗ್ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

45 ವರ್ಷದ ಈ ವ್ಯಕ್ತಿ ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆಯಿಂದ (ಐಎಲ್ ಐ) ಬಳಲುತ್ತಿದ್ದರು. ಇವರ ರಕ್ತ ಹಾಗೂ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅವರು ಕಾರ್ಯನಿರ್ವಹಿಸುತ್ತಿದ್ದ ಹೋಟೆಲ್ ನಲ್ಲಿ 70 ಕ್ಕೂ ಅಧಿಕ ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. 

ಈಗ ಹೋಟೆಲ್ ಗೆ ತಾತ್ಕಾಲಿಕವಾಗಿ ಬೀಗ ಹಾಕಿ, ಅಲ್ಲಿದ್ದವರನ್ನು ಇನ್ನೊಂದು ಹೋಟೆಲ್ ಗೆ ಸ್ಥಳಾಂತರ ಮಾಡಲಾಗಿದೆ. ಅವರಲ್ಲಿ ಯಾರಿಗೂ ಸೋಂಕು ಹರಡಿಲ್ಲ ಎನ್ನುವುದು ಪ್ರಾಥಮಿಕ ತಪಾಸಣೆಯಿಂದ ತಿಳಿದುಬಂದಿದೆ.

Stay up to date on all the latest ರಾಜ್ಯ news
Poll
Defence minister Rajanath Singh

101 ರಕ್ಷಣಾ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳಲು ನಿರ್ಬಂಧ ಹೇರುವ ಭಾರತದ ಕ್ರಮವು, ದೇಶೀಯ ಶಸ್ತ್ರಾಸ್ತ್ರ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆಯೆ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp