ಕರ್ತವ್ಯಕ್ಕೆ ಹಾಜರಾಗುವ ಬಿಎಂಟಿಸಿ ಸಿಬ್ಬಂದಿಗೆ ವೈದ್ಯಕೀಯ ತಪಾಸಣೆ ಕಡ್ಡಾಯ

ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಎಲ್ಲ ಸಿಬ್ಬಂದಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಎಲ್ಲ ಸಿಬ್ಬಂದಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಹೊಸದಾಗಿ ಕರ್ತವ್ಯಕ್ಕೆ ಹಾಜರಾಗುವ ಪ್ರತಿಯೊಬ್ಬ ಸಿಬ್ಬಂದಿಯನ್ನು ಸಂಸ್ಥೆಯ ಮುಖ್ಯ ವೈದ್ಯಾಧಿಕಾರಿಗಳ ಮೂಲಕ ತಪಾಸಣೆ ಗೊಳಪಡಿಸಬೇಕೆಂದು ಬಿಎಂಟಿಸಿ ನಿರ್ದೇಶನ ನೀಡಿದೆ. ಕೊರೋನಾ ವೈರಸ್ ಹರಡುವಿಕೆಯನ್ನು ತಡೆಯಲು ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳನ್ನು  ವೈದ್ಯಕೀಯ ತಪಾಸಣೆಗೆ ಒಳಪಡಿಸುವುದು ಅವಶ್ಯಕವಾಗಿದ್ದು, ಹೊಸದಾಗಿ ಹಾಜರಾಗುವ ಪ್ರತಿಯೊಬ್ಬ ಸಿಬ್ಬಂದಿಯನ್ನು ಸಂಸ್ಥೆಯ ಮುಖ್ಯ ವೈದ್ಯಾಧಿಕಾರಿಗಳ ಮೂಲಕ ತಪಾಸಣೆ ಗೊಳಪಡಿಸಬೇಕೆಂದು ಬಿಎಂಟಿಸಿ ನಿರ್ದೇಶನ ನೀಡಿದೆ.

ವರದಿ ಬಳಿಕವೇ ಕರ್ತವ್ಯಕ್ಕೆ ಹಾಜರಿ!
ಬಿಎಂಟಿಸಿ ಸಿಬ್ಬಂದಿಗಳು ತಪಾಸಣೆ ಬಳಿಕ ವೈದ್ಯಕೀಯ ಪ್ರಮಾಣ ಪತ್ರ ಪಡೆದ ನಂತರವೇ ಕರ್ತವ್ಯಕ್ಕೆ ವರದಿ ಮಾಡಿಸಿಕೊಳ್ಳಬೇಕು. ಎಲ್ಲ ಘಟಕ ಕಾರ್ಯ ಸ್ಥಳದಲ್ಲಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಪ್ರತಿದಿನ ಪ್ರತಿಯೊಬ್ಬ ನೌಕರರನ್ನು ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ  ಮಾಡಬೇಕು. ಸಿಬ್ಬಂದಿ ಸದೃಢವೆಂದು ಕಂಡುಬಂದಲ್ಲಿ ಮಾತ್ರ ಕರ್ತವ್ಯ ನಿರ್ವಹಿಸಲು ಅನುಮತಿಸಬೇಕೆಂದು ಬಿಎಂಟಿಸಿಯ ಭದ್ರತಾ ಮತ್ತು ಜಾಗೃತಾ ನಿರ್ದೇಶಕರು ಸೂಚಿಸಿದ್ದಾರೆ. ಬಿಎಂಟಿಸಿಯ ಕೇಂದ್ರ ಕಚೇರಿ, ಎಲ್ಲಾ ಇಲಾಖೆ ಮುಖ್ಯಸ್ಥರು, ಕಾರ್ಯ ವ್ಯವಸ್ಥಾಪಕರು ಎಲ್ಲ ವಿಭಾಗೀಯ  ನಿಯಂತ್ರಣಾಧಿಕಾರಿಗಳು, ಎಲ್ಲ ಘಟಕಗಳ ವ್ಯವಸ್ಥಾಪಕರುಗಳಿಗೆ ಈ ನಿರ್ದೇಶನವನ್ನು ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com